ಬೆಳಗಾವಿ: ಡಾ. ಮನಮೋಹನ್ ಸಿಂಗ್ ಅವರ ನಿಧನದ ಆಘಾತಕಾರಿ ಸುದ್ದಿ ತಿಳಿದು ಅಪಾರ ದುಃಖವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.
ಭಾರತದ ಮಾಜಿ ಪ್ರಧಾನಮಂತ್ರಿಯಾಗಿ, ದೃಷ್ಟಿಯುಳ್ಳ ನಾಯಕನಾಗಿ ಮತ್ತು ಗಣ್ಯ ಅರ್ಥಶಾಸ್ತ್ರಜ್ಞನಾಗಿ ದೇಶದ ಸೇವೆಗೆ ತಮ್ಮ ಜೀವನವನ್ನು ಸಮರ್ಪಿಸಿದ್ದರು. ಭಾರತದ ಆರ್ಥಿಕ ಪ್ರಗತಿಗೆ ಅವರು ನೀಡಿದ ಅಮೂಲ್ಯ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಕುಟುಂಬದ ಸದಸ್ಯರು, ಆಪ್ತರು ಮತ್ತು ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಅವರ ಈ ನೋವಿನಲ್ಲಿ ನಾನು ಸಹ ಭಾಗಿಯಾಗಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.