ರಾಯಬಾಗ ತಾಲೂಕಿನ 39 ಕೆರೆಗಳಿಗೆ ನೀರು ತುಂಬುವ ಯೋಜನೆಗೆ ಡಿ. 7ರಂದು ಚಾಲನೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಬಾವನಸೌಂದತ್ತಿ ಗ್ರಾಮದಲ್ಲಿ ಕೃಷ್ಣಾ ನದಿಯಿಂದ ರಾಯಬಾಗ ತಾಲೂಕಿನ 39 ಕೆರೆಗಳಿಗೆ ನೀರು ತುಂಬುವ ಯೋಜನೆಗೆ ಡಿ. 7ರಂದು ಚಾಲನೆ ನೀಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿದ ಸಚಿವರು, 2013ರಲ್ಲಿಯೇ ಸಿಎಂ ಸಿದರಾಮಯ್ಯನವರು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಆದರೆ ಕೆಲ ಕಾರಣಗಳಿಂದ ಈ ಯೋಜನೆ ಪೂರ್ಣಗೊಳ್ಳಲು ವಿಳಂಬವಾಗಿದೆ. ಆದರೆ ಕಳೆದ ಆರು ತಿಂಗಳಲ್ಲಿ ನಾನೇ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಗುತ್ತಿಗೆದಾರರಿಗೆ ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿ, ಈಗ ಕಾಮಗಾರಿ ಚಾಲನೆ ಹಂತಕ್ಕೆ ಬಂದಿದು ಖುಷಿ ತರಿಸಿದೆ ಎಂದು ತಿಳಿಸಿದ್ದಾರೆ.
ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಒಂದು ಬಾರಿ ಕಾಮಗಾರಿ ವೀಕ್ಷಿಸಿ, ಪರಿಶೀಲಿಸಿದ್ದಾರೆ. ಈ ಯೋಜನೆಯಿಂದ ರಾಯಬಾಗ ತಾಲೂಕಿನ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಕೆರೆ ತುಂಬುವ ಯೋಜನೆಯ ಕನಸು ನನಸಾಗಲಿದೆ. ಈ ಯೋಜನೆ ತರಲು ಮಹಾವೀರ ಮೋಹಿತೆ ಬಹಳಷ್ಟು ಶ್ರಮ ಪಟ್ಟಿದ್ದಾರೆ ಎಂದು ಸಚಿವರು ಹೇಳಿದ್ದಾರೆ.


