ಡಿಸಿಸಿ ಬ್ಯಾಂಕ್ ಚುನಾವಣೆ ಕುರಿತು ಬಿಗ್ ಟ್ವಿಸ್ಟ್ ಹೇಳಿಕೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ

Ravi Talawar
ಡಿಸಿಸಿ ಬ್ಯಾಂಕ್ ಚುನಾವಣೆ ಕುರಿತು ಬಿಗ್ ಟ್ವಿಸ್ಟ್ ಹೇಳಿಕೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ
WhatsApp Group Join Now
Telegram Group Join Now
ಚನ್ನರಾಜ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಚುನಾವಣಾ ಕಣದಿಂದ ಹಿಂದಕ್ಕೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ಮಿಂಚಿನ ಬೆಳವಣಿಗೆ ನಡೆದಿದ್ದು, ನಿರ್ದೇಶಕ ಸ್ಥಾನದ ಚುನಾವಣಾ ಕಣದಿಂದ ಸಚಿವೆ ಹೆಬ್ಬಾಳ್ವರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಹಿಂದೆ ಸರಿದಿದ್ದಾರೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್
ಚುನಾವಣೆ ಕಣದಿಂದ ಸಚಿವ ಸತೀಶ್ ಜಾರಕಿಹೊಳಿ ಮನವೊಲಿಕೆ ಹಿನ್ನೆಲೆಯಲ್ಲಿ ಚುನಾವಣೆ ಕಣದಿಂದ ಚನ್ನರಾಜ್ ಹಿಂದಕ್ಕೆ ಸರಿದಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ವಿಡಿಯೋ ಹೇಳಿಕೆ
ಬಿಡುಗಡೆ ಮಾಡಿ ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.
ಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆಗೆ ಕಳೆದ ನಾಲ್ಕೆದು ತಿಂಗಳಿಂದ ಚನ್ನರಾಜ್ ತಯಾರಿ ನಡೆಸಿದ್ದರು. ಖಾನಾಪುರ ತಾಲೂಕಿನಿಂದ ಚನ್ನರಾಜ್ ಹಟ್ಟಿಹೊಳಿ ಕಣಕ್ಕಿಳಿಯಲು ತಯಾರಿ ನಡೆಸಿದ್ದರು. ಖಾನಾಪುರದ ಪಿಕೆಪಿಎಸ್ ನಿರ್ದೇಶಕರ ಮನ ಗೆಲ್ಲಲು ಚನ್ನರಾಜ್ ಯಶಸ್ವಿಯಾಗಿದ್ದರು. ಜಿಲ್ಲೆಯ ರಾಜಕಾರಣ ಹಾಗೂ ರಾಜಕೀಯ ದೃಷ್ಟಿಯಿಂದ ಚನ್ನರಾಜ್ ಸ್ಪರ್ಧೆಯಿಂದ ಹಿಂಪಡೆಯಲಿದ್ದಾರೆ. ಚುನಾವಣೆ ಕಣದಿಂದ ಚನ್ನರಾಜ್ ಹಿಂದೆ ಸರಿದಿದ್ದೇಕೆ ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಹಂಚಿಕೊಳ್ಳುವೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
WhatsApp Group Join Now
Telegram Group Join Now
Share This Article