ಬೆಳಗಾವಿ, ಡಿ.31: ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರದ ಗ್ಯಾರಂಟಿ ಯೋಜನೆಯಡಿಯಲ್ಲಿ ಒಂದಾದ “ಯುವನಿಧಿ ಯೋಜನೆ” ಯಲ್ಲಿ “2024ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭ”ಗೊಂಡಿರುವ “ಪೋಸ್ಟರ್ ಮತ್ತು ಬ್ಯಾನರ್”ಗಳನ್ನು ಮಂಗಳವಾರ (ಡಿ.31) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೋಳಿ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್ (ರಾಜು ) ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಸಿಇಒ ರಾಹುಲ್ ಶಿಂಧೆ, ಡಿಸಿಪಿ ರೋಹನ್ ಜಗದೀಶ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಆರ್.ಎಸ್ ಚಿಕ್ಕಮಠ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ರವಿಶಂಕರ ಚನಾಳ, ಜಿ.ಎಸ್ ಕೋರಸಗಾಂವ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.