ಯೋಗಿ ಕೊಳ್ಳದಲ್ಲಿ ಸಮಯ ಕಳೆದ ಸಚಿವ ಸತೀಶ್‌ ಜಾರಕಿಹೊಳಿ

Ravi Talawar
ಯೋಗಿ ಕೊಳ್ಳದಲ್ಲಿ ಸಮಯ ಕಳೆದ ಸಚಿವ ಸತೀಶ್‌ ಜಾರಕಿಹೊಳಿ
WhatsApp Group Join Now
Telegram Group Join Now
ಗೋಕಾಕ: ನಾಳೆಯೇ (ಜೂನ್‌ 4) ಲೋಕಸಭೆ ಚುನಾವಣೆಯ ಫಲಿತಾಂಶ ತಿಳಿಯಲಿದ್ದು, ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ  ಸಚಿವ ಸತೀಶ್‌ ಜಾರಕಿಹೊಳಿಯವರು ಪಟ್ಟಣದ ಹೊರ ವಲಯದ ಮಾರ್ಕಂಡೇಯ ನದಿ ಪಕ್ಕದಲ್ಲಿರುವ ಯೋಗಿ ಕೊಳ್ಳದ ಬಳಿ ಉಪಹಾರ ಸವಿದು, ಬೆಂಬಲಿಗರೊಂದಿಗೆ ಸಮಯ ಕಳೆದರು.
ಸತೀಶ್‌ ಜಾರಕಿಹೊಳಿ ಅವರನ್ನು ಯೋಗಿ ಕೊಳ್ಳದ ಬಳಿ ನೋಡಿದ ಸಾರ್ವಜರಿಕರು ಖುಷಿ ವ್ಯಕ್ತಪಡಿಸಿ, ಅವರೊಂದಿಗೆ ಸೆಲ್ಫಿ ತೆಗೆದುಕೊಂಡು ಸಂತಸ ಪಟ್ಟರು.
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾವು ಕೊಟ್ಟಂತ ಗ್ಯಾರಂಟಿಗಳನ್ನು ನಂಬಿ, ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ರೈತರು, ಮಹಿಳೆಯರು, ಯುವಕರು ಎಲ್ಲಾ ವರ್ಗದ ಜನ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚಿನ ಮತಗಳನ್ನು ನೀಡಿದ್ದಾರೆ. ಚಿಕ್ಕೋಡಿ ಸೇರಿದಂತೆ ರಾಜ್ಯದಲ್ಲಿ ಹೆಚ್ಚಿನ ಸೀಟು ಕಾಂಗ್ರೆಸ್‌ ಗೆಲ್ಲಲ್ಲಿದೆ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್‌ ಮುಖಂಡ ವಿವೇಕ ಜತ್ತಿ ಸೇರಿದಂತೆ ಹಲವು ಇದ್ದರು.
WhatsApp Group Join Now
Telegram Group Join Now
Share This Article