ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಗೆ ಅಭಿನಂದನೆ ಸಲ್ಲಿಸಿದ ಸಚಿವ ಸತೀಶ್-ಸಂಸದೆ ಪ್ರಿಯಂಕಾ

Ravi Talawar
ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಗೆ ಅಭಿನಂದನೆ ಸಲ್ಲಿಸಿದ ಸಚಿವ ಸತೀಶ್-ಸಂಸದೆ ಪ್ರಿಯಂಕಾ
WhatsApp Group Join Now
Telegram Group Join Now
ಬೆಂಗಳೂರು:  ಕನ್ನಡದ ಹೆಸರಾಂತ ಲೇಖಕಿ ಬಾನು ಮುಷ್ತಾಕ್ ಅವರು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಚಿಕ್ಕೋಡಿ ಕ್ಷೇತ್ರದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ  ವಿಷಯ ತಿಳಿಸಿದ ಅವರು,  ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಕನ್ನಡದ ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಷ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ.  ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹಾರೈಸಿದ್ದಾರೆ.
ಅಭಿನಂದಿಸಿದ ಪ್ರಿಯಂಕಾ: ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ಕ್ಷಣ. ಜಾಗತಿಕ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ನಮ್ಮ ನಾಡಿನ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಬಾನು ಮುಷ್ತಾಕ್ ಅವರಿಂದ ಇದೇ ರೀತಿಯಲ್ಲಿ ಇನ್ನಷ್ಟು ಉತ್ತಮ ಕೃತಿಗಳು ಬರಲಿ. ಅವರಿಂದ ಕನ್ನಡ ಸಾಹಿತ್ಯಲೋಕ ಮತ್ತಷ್ಟು ಶ್ರೀಮಂತವಾಗಲಿ ಹಾಗೂ ಜಗತ್ತಿನ ಉದ್ದಗಲಕ್ಕೂ ಕನ್ನಡದ ಕಂಪು ಹರಡಲಿ ಎಂದು ಹಾರೈಸುತ್ತೇನೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article