ಮಾಜಿ ಮೇಯರ್ ಅಬ್ದುಲ್ ಮಲಿಕ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ

Ravi Talawar
WhatsApp Group Join Now
Telegram Group Join Now

ನಾಸಿಕ್27: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್‌ನಲ್ಲಿ ಎಐಎಂಐಎಂ ನಾಯಕ ಹಾಗೂ ಮಾಜಿ ಮೇಯರ್ ಅಬ್ದುಲ್ ಮಲಿಕ್ ಎಂಬವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಮಲಿಕ್‌ಗೆ ಮೂರು ಗುಂಡುಗಳು ತಗುಲಿದ್ದು ಪರಿಸ್ಥಿತಿ ಚಿಂತಾಜನಕವಾಗಿದೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ. ಘಟನೆಯ ನಂತರ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.

ಭಾನುವಾರ ರಾತ್ರಿ ಅಬ್ದುಲ್ ಮಲಿಕ್ ಮಾಲೆಗಾಂವ್ ಚೌಕ್‌ನಲ್ಲಿರುವ ಹೋಟೆಲ್‌ವೊಂದರಲ್ಲಿ ಟೀ ಕುಡಿಯುತ್ತಾ ಕುಳಿತಿದ್ದಾಗ ಬೈಕ್​ನಲ್ಲಿ ಬಂದ ಮೂವರು ಮೂರು ಸುತ್ತು ಗುಂಡು ಹಾರಿಸಿದ್ದಾರೆ.

ಅಬ್ದುಲ್ ಮಲಿಕ್‌ ಅವರ ಕೈ, ಕಾಲು ಮತ್ತು ಎದೆಗೆ ಗುಂಡುಗಳು ತಗುಲಿವೆ. ಇದೀಗ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಗೆ ಕಾರಣ ತಿಳಿದು ಬಂದಿಲ್ಲ. ಎಐಎಂಐಎಂ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article