ಚ. ಕಿತ್ತೂರು. ಪ್ರಸಕ್ತವಾಗಿ ನಡೆಯುತ್ತಿರುವ 201 ನೇ ಕಿತ್ತೂರು ಉತ್ಸವದ ಅಂಗವಾಗಿ ಇಲ್ಲಿಗೆ ಸಮೀಪದ ಹುಲಿಕಟ್ಟಿ ಗ್ರಾಮದ ಮುರಾರ್ಜಿ ವಸತಿ ಶಾಲೆಯಲ್ಲಿ ಮಹಿಳೆಯರ ಬೈಕ್ ರ್ಯಾಲಿಯನ್ನು ಚ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಚಾಲನೆ ನೀಡಿ ಮಾತನಾಡಿ ಇಂದಿನ ಕಾಲದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂದೆ ಬಂದು ಸ್ವಾವಲಂಬನೆ ಜೀವನ ನಡೆಸಿ ಶಿಕ್ಷಣ, ಉದ್ಯೋಗ, ವ್ಯಾಪಾರಗಳಲ್ಲಿ ಮುಂದೆ ಬರುತಿದ್ದು ಅವರಿಗೆ ತಾಯಿ ಚನ್ನಮ್ಮಾಜಿ ಪ್ರೇರಣೆ ಎಂದರು.
ಕೆಪಿಸಿಸಿ ಸದಸ್ಯ ಶ್ರೀಮತಿ ರೋಹಿಣಿ ಪಾಟೀಲ ಮಾತನಾಡಿ ಕಿತ್ತೂರು ಉತ್ಸವದ ಪ್ರಯುಕ್ತ ಮಹಿಳೆಯರಲ್ಲಿ ಉತ್ಸಾಹ ತುಂಬುವ ನಿಟ್ಟಿನಲ್ಲಿ ಹಾಗೂ ಚನ್ನಮ್ಮ ತಾಯಿಯ ಸವಿ ನೆನಪಿನ ಹಾದಿಯಲ್ಲಿ ಬೈಕ್ ರ್ಯಾಲಿ ಏರ್ಪಡಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಕಿತ್ತೂರು ಕ್ಷೇತ್ರದ ಅನೇಕ ಮಹಿಳೆಯರು ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ್ದರು.


