ಪರಮೇಶ್ವರ್ ಮನೆಗೆ ಮುತ್ತಿಗೆ ಯತ್ನ: ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ ಪೊಲೀಸ್‌ ವಶಕ್ಕೆ

Ravi Talawar
ಪರಮೇಶ್ವರ್ ಮನೆಗೆ ಮುತ್ತಿಗೆ ಯತ್ನ: ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ ಪೊಲೀಸ್‌ ವಶಕ್ಕೆ
WhatsApp Group Join Now
Telegram Group Join Now

ತುಮಕೂರು: ಹೇಮಾವತಿ ನದಿ ನೀರು ಲಿಂಕ್​ ಕೆನಾಲ್ ಕಾಮಗಾರಿ ವಿರೋಧಿಸಿ ಗೃಹ ಸಚಿವ ಜಿ.ಪರಮೇಶ್ವರ್​ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ತುರುವೇಕೆರೆ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಅವರನ್ನು ಇಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗ್ಗೆ 11 ಗಂಟೆಗೆ ಮುತ್ತಿಗೆ ಹಾಕಲು ಬರುತ್ತಿದ್ದಂತೆ ಎಂ.ಟಿ.ಕೃಷ್ಣಪ್ಪರನ್ನು ಗುಬ್ಬಿ ತಾಲೂಕಿನ ಕಲ್ಲೂರು ಕ್ರಾಸ್ ಬಳಿ ಪೊಲೀಸರು ವಶಕ್ಕೆ ಪಡೆದರೆ, ಸೊಗಡು ಶಿವಣ್ಣರನ್ನು ತುಮಕೂರು ನಗರದಲ್ಲಿ ವಶಕ್ಕೆ ಪಡೆದಿದ್ದು, ಬಿಎಆರ್ ಗ್ರೌಂಡ್​ನಲ್ಲಿ ಇರಿಸಿದ್ದಾರೆ.

ಒಂದು ವಾರದ ಹಿಂದೆ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕುವ ಕುರಿತು ಲಿಂಕ್ ಕೆನಾಲ್ ಯೋಜನೆ ಹೋರಾಟ ಸಮಿತಿ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಸಚಿವರ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

WhatsApp Group Join Now
Telegram Group Join Now
Share This Article