ಬೆಂಗಳೂರು: ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಕೇಸ್ನಲ್ಲಿ ಜೈಲುಪಾಲಾಗಿದ್ದ ಶಾಸಕ ಮುನಿರತ್ನಗೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆಗಿ ಹೊರ ಬಂದಾತಕ್ಷಣ ಕಗ್ಗಲಿಪುರ ಪೊಲೀಸರು ಹಾಗೂ ಡಿವೈಎಸ್ಪಿ ದಿನಕರ್ ಶೆಟ್ಟಿ ಮುನಿರತ್ನರನ್ನು ವಶಕ್ಕೆ ಪಡೆದಿದ್ದಾರೆ. ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾದ ಬಳಿಕ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೋವಿಡ್ ಸಮಯದಲ್ಲಿ ನನ್ನ ಸಾಮಾಜಿಕ ಸೇವೆಯನ್ನು ಗುರುತಿಸಿ ಮುನಿರತ್ನ ಕರೆ ಮಾಡಿದ್ದರು. ಅದರಂತೆ ಭೇಟಿಯಾದ ಸಂತ್ರಸ್ತೆ ಹಾಗೂ ಮುನಿರತ್ನ ನಡುವೆ ಆತ್ಮೀಯತೆ ಬೆಳೆದಿತ್ತು. ಆಗಾಗ ವಿಡಿಯೊ ಕಾಲ್ ಮೂಲಕ ಮಾತನಾಡುತ್ತಿದ್ದರು. ಹೀಗೊಂದು ದಿನ ನಗ್ನವಾಗಿ ವಿಡಿಯೊ ಕರೆ ಮಾಡುವಂತೆ ಒತ್ತಾಯಿಸಿದಾಗ ಸಂತ್ರಸ್ತೆ ನಿರಾಕರಿಸಿದ್ದರಂತೆ. ಇದಾದ ಬಳಿಕ ಸಂತ್ರಸ್ತೆಯನ್ನು ಗೋಡೌನ್ಗೆ ಕರೆಸಿಕೊಂಡು ನಿನ್ನ ನೋಡಿದರೆ ಮೈ ಜುಮ್ ಎನಿಸುತ್ತೆ ಎಂದೇಳಿ ತಬ್ಬಿಕೊಳ್ಳಲು ಮುಂದಾಗಿದ್ದರಂತೆ.