ಪ್ರತಿಪಕ್ಷ ನಾಯಕ ಅಶೋಕ್ ವಿರುದ್ಧ ಶಾಸಕ ಪ್ರದೀಪ್‌ ಹಕ್ಕು ಚ್ಯುತಿ ಮಂಡನೆ

Ravi Talawar
ಪ್ರತಿಪಕ್ಷ ನಾಯಕ ಅಶೋಕ್ ವಿರುದ್ಧ ಶಾಸಕ ಪ್ರದೀಪ್‌ ಹಕ್ಕು ಚ್ಯುತಿ ಮಂಡನೆ
WhatsApp Group Join Now
Telegram Group Join Now

ಬೆಂಗಳೂರು: ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಸದನದಲ್ಲಿ  ಸೋಮವಾರ ಹಕ್ಕು ಚ್ಯುತಿ ಮಂಡನೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ವಿಪಕ್ಷ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಪ್ರದೀಪ್‌ ಈಶ್ವರ್‌ ಆಗ್ರಹಿಸಿದ್ದಾರೆ.

16ನೇ ವಿಧಾನ ಸಭೆಯ 4ನೇ ಅಧಿವೇಶನದಲ್ಲಿ ಜುಲೈ 19ರಂದು ನಾನು ಮಾತನಾಡುವ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮತ್ತು ನಾನು ಮಾತನಾಡದಂತೆ ಅಡ್ಡಿಪಡಿಸಿದ್ದಾರೆ. ಆದ್ದರಿಂದ ಅವರ ಮೇಲೆ ಹಕ್ಕುಚ್ಯುತಿ ಮಂಡಿಸಲು ಅನುಮತಿ ನೀಡಬೇಕು ಎಂದು ಪ್ರದೀಪ್‌ ಈಶ್ವರ್‌ ಮನವಿ ಮಾಡಿದ್ದರು. ಹೀಗಾಗಿ ಹಕ್ಕು ಚ್ಯುತಿ ಮಂಡನೆಗೆ ಸ್ಪೀಕರ್ ಯು.ಟಿ. ಖಾದರ್‌ ಅನುಮತಿ ನೀಡಿದರು.

ಆರ್.ಆಶೋಕ್ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡಿ ಮಾತನಾಡಿದ ಪ್ರದೀಪ್ ಈಶ್ವರ್, ಮೊದಲ ಬಾರಿ ಶಾಸಕರಾದಾಗ ಖುಷಿ ಪಡಲು ಆರ್. ಆಶೋಕ್ ಅವರ ತಂದೆ-ತಾಯಿ ಇದ್ದರು. ಆದರೆ, ನಾನು ಶಾಸಕನಾದಾಗ ಖುಷಿ ಪಡಲು ನನ್ನ ತಂದೆ-ತಾಯಿ ಇರಲಿಲ್ಲ. ನಾನು ತಂದೆ-ತಾಯಿ ಕಳೆದುಕೊಂಡು ಪೇರೆಸಂದ್ರ ಗ್ರಾಮದಲ್ಲಿ ಕೂಲಿ ಮಾಡಿದ್ದೇನೆ, ತೋಟಕ್ಕೆ ನೀರು ಹರಿಸಿದ್ದೇನೆ. ಶಾಸಕನಾದ ಬಳಿಕ ಜನರಿಗೆ ಅನುಕೂಲವಾಗಲು 10 ಉಚಿತ ಆಂಬ್ಯುಲೆನ್ಸ್ ನೀಡಿದ್ದೇನೆ. ಅನೇಕ ಮಕ್ಕಳ ವಿಧ್ಯಾಭ್ಯಾಸಕ್ಕೆ ನೆರವಾಗಿದ್ದೇನೆ. ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಆರ್. ಆಶೋಕ್ ಅಣ್ಣಾನ ಬಗ್ಗೆ ನನಗೆ ಗೌರವ ಇದೆ, ಅವರು ಮಾತುಗಳ ಬಗ್ಗೆ ನನಗೆ ಉತ್ತರ ಕೊಡಲಿ ಎಂದು ಆಗ್ರಹಿಸಿದರು.

 

WhatsApp Group Join Now
Telegram Group Join Now
Share This Article