ಧಾರವಾಡ, ಜನವರಿ 04: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕರ್ನಾಟಕದಲ್ಲಿ ತೀವ್ರ ಸಂಚಲನ ಉಂಟು ಮಾಡಿತ್ತು. ಯೋಗೀಶ್ ಗೌಡನನ್ನು ಕೊಲೆ ಮಾಡಿಸಿದ್ದೇ ಶಾಸಕ ವಿನಯ್ ಕುಲಕರ್ಣಿ ಎಂದು ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಆಪ್ತನೂ ಆಗಿರುವ ಬಸವರಾಜ ಮುತ್ತಗಿ ತಪ್ಪೊಪ್ಪಿಗೆ ಹೇಳಿಕೆಯಿಂದ ಶಾಸಕ ವಿನಯ್ ಕುಲಕರ್ಣಿ ಮೇಲಿನ ಕಾನೂನು ಕುಣಿಕೆ ಮತ್ತಷ್ಟು ಬಿಗಿಯಾಗಿದೆ.
ಯೋಗೇಶ್ ಗೌಡ ಹತ್ಯೆಗೆ ಮೊದಲು ಧಾರವಾಡದ ವಿಕಾಸ್ ಕಲಬುರಗಿ, ಕೀರ್ತಿ ಕುಮಾರ್ ಕುರಹಟ್ಟಿ, ವಿಕ್ರಂ ಬಳ್ಳಾರಿ, ಸಂದೀಪ್ ಸವದತ್ತಿ, ಮಹಾಬಲೇಶ್ವರ ಅವರಿಗೆ ಸುಪಾರಿ ನೀಡಲು ವಿನಯ್ ಕುಲಕರ್ಣಿ ನಿರ್ಧರಿಸಿದ್ದರು. ಅದರಂತೆ, ಈ ಹುಡುಗರು ಮುಂದೆ ವಿನಯ್ ಕುಲಕರ್ಣಿ ವಿಚಾರ ಪ್ರಸ್ತಾಪಿಸಲಾಯಿತು. ಆದರೆ, ಅವರು ತಿರಸ್ಕರಿಸಿದರು ಎಂದು ಮುತ್ತಗಿ ತಪ್ಪೊಪ್ಪಿಗೆಯಲ್ಲಿ ಹೇಳಿದ್ದಾರೆ.