ಮುಂಗಾರು ಅಧಿವೇಶನಕ್ಕೆ ಬೇಗ ಹಾಜರಾದರೆ ಶಾಸಕರಿಗೆ ಬಹುಮಾನ!

Ravi Talawar
ಮುಂಗಾರು ಅಧಿವೇಶನಕ್ಕೆ ಬೇಗ ಹಾಜರಾದರೆ ಶಾಸಕರಿಗೆ ಬಹುಮಾನ!
WhatsApp Group Join Now
Telegram Group Join Now

ಬೆಂಗಳೂರು, ಜುಲೈ 12: 16ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ   ಜುಲೈ 15 ರಿಂದ 26ರವರೆಗೆ ನಡೆಯುವುದು. ಒಟ್ಟು 9ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ಸಭಾಧ್ಯಕ್ಷ ಯು.ಟಿ ಖಾದರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಯು.ಟಿ.ಖಾದರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನ ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು ಎಂದರು.

9 ದಿನಗಳ ಕಾಲ ಪ್ರಶ್ನೋತ್ತರ ಕಲಾಪವನ್ನು ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನ ಸೆಳೆಯುವ ಸೂಚನೆ, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳ ಕಾರ್ಯಕ್ರಮಗಳನ್ನ ನಡೆಸಲಾಗುವುದು.

2024-24ನೇ‌ ಸಾಲಿನ ವಿಧಾನ ಮಂಡಲ, ವಿಧಾನ ಸಭೆಯ ಸ್ಥಾಯಿ ಸಮಿತಿಗಳ ಅವಧಿ ಆಗಸ್ಟ್​ 8ರಂದು ಮುಕ್ತಾಯಗೊಳ್ಳಲಿದೆ. ಹೀಗಾಗಿ 2024-25ನೇ ಸಾಲಿಗೆ ಹೊಸದಾಗಿ ಸಮಿತಿಗಳನ್ನ ರಚಿಸುವ ಸಂಬಂಧ ಚುನಾವಣಾ ಪ್ರಸ್ತಾವವನ್ನ ಮಂಡಿಸಿ, ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.

 

WhatsApp Group Join Now
Telegram Group Join Now
Share This Article