ಬಳ್ಳಾರಿ.ಸೆ. 20.. ಇಂದಿನ ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಬಗ್ಗೆ ಮತ್ತು ಸಂಸತ್ತಿನ ಕಲಾಪಗಳ ಬಗ್ಗೆ ಹಾಗೂ ಪ್ರಜಾತಂತ್ರ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ ಸಂಸತ್ತಿನಲ್ಲಿ ನಡೆಯುವ ಕಲಾಪಗಳನ್ನು ಕಾಲೇಜುಗಳಲ್ಲಿ ನಡೆಸುವುದು ಹೆಮ್ಮೆಯ ವಿಚಾರ ದೇಶವನ್ನು ಕಟ್ಟುವ ನೀವು ದೇಶದ ಆಡಳಿತದ ಯತ್ರಾಂಗದ ಕಾರ್ಯವೈಕರಿಯ ಬಗ್ಗೆ ತಿಳಿಯುವುದು ಬಹಳ ಮುಖ್ಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ. ಬಿ. ನಾಗಲಿಂಗ ಸ್ವಾಮಿ ತಿಳಿಸಿದರು.
ಅವರು ನಗರದ ಸೇಂಟ್ ಜಾನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಸಂಸದೀಯ ವ್ಯವಹಾರಗಳ ಇಲಾಖೆ ಬೆಂಗಳೂರು ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಬಳ್ಳಾರಿ ಹಾಗೂ ಬಳ್ಳಾರಿ ಜಿಲ್ಲಾ ಪ್ರಾಚಾರ್ಯರ ಸಂಘ ಇವರ ಸಹಯೋಗದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಯುವ ಸಂಸತ್ ಅಣಕು ಸ್ಪರ್ಧೆ 2025 ರ ಕಾರ್ಯಕ್ರಮವನ್ನು ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮುಖ್ಯ ಅತಿಥಿಗಳಾದ ಎಂ ಶ್ರೀಶೈಲ ರವರು ಕಾರ್ಯಕ್ರಮದ ಕುರಿತು ಪ್ರಸ್ತಾವಿಕ ನುಡಿ ನುಡಿದರು. ಮುಖ್ಯ ಅತಿಥಿಗಳಾದ ಕೃಷ್ಣಮೂರ್ತಿ ರವರು ಸಂಸತ್ತಿನ ಮಹತ್ವ ತಿಳಿಸಿದರು.
ಯುವ ಅಣಕು ಸಂಸತ್ತಿನ ಸಂಚಾಲಕರಾದ ನಾಗರೆಡ್ಡಿ ಕೆ ವಿ ರವರು ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ ಹೊರತು ಬಹುಮಾನಗಳಲ್ಲ ಎಂದು ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸೇಂಟ್ ಜಾನ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ಹಾಗೂ ಪ್ರಾಚಾರ್ಯರ ಸಂಘದ ಅಧ್ಯಕ್ಷ ಸಣ್ಣ ಶಿವರಾಮ ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಸಂಸತ್ತಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಅದೃಷ್ಟವೇ ಸರಿ ಈ ಭಾಗ್ಯ ಎಲ್ಲರಿಗೂ ಸಿಗುವುದಿಲ್ಲ ದೇಶದ ಗೌರವಾನ್ವಿತ ಹುದ್ದೆಯಲ್ಲಿ ಒಂದು ದಿನ ನೀವು ಸಂಸತ್ತಿನಲ್ಲಿ ಭಾಗವಹಿಸಿ ಸಂಸತ್ ಅಧಿವೇಶನದಲ್ಲಿ ನಡೆಸಲಾಗುವ ಪ್ರಶ್ನೆ ಉತ್ತರಗಳಿಂದ ನಮ್ಮೆಲ್ಲರನ್ನು ಮಂತ್ರಮುಗ್ಧಗೊಳಿಸುವ ಜವಾಬ್ದಾರಿ ನಿಮ್ಮದು ಎಂದು ನುಡಿದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಉಪನ್ಯಾಸಕರಾದ ಈರೇಶಪ್ಪ. ಕೆ. ಪ್ರಾರ್ಥನೆಯನ್ನು ನೆರವೇರಿಸಿದರು ಡಾ. ಲೋಹಿತ್ ಕುಮಾರ್ ಕಾರ್ಯಕ್ರಮದ ಅತಿಥಿಗಳನ್ನು ಸ್ವಾಗತಿಸಿದರು, ಸಮಾಜಶಾಸ್ತ್ರದ ಉಪನ್ಯಾಸಕರಾದ ಅಲೆಗ್ಸಾಂಡರ್ ವಂದಿಸಿದರು.
ಈ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕಿನಿಂದ 60ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಈ ಅಣಕು ಸಂಸತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಮಟ್ಟದ ಯುವ ಸಂಸತ್ ಅಣಕು ಸ್ಪರ್ಧೆಯಲ್ಲಿ ಸರ್ಕಾರಿ ಮಾಜಿ ಪುರಸಭೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಡಿ ಪವನ್ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿ ಪ್ರಥಮ ಸ್ಥಾನ, ಸೇಂಟ್ ಜಾನ್ಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಧಾನಮಂತ್ರಿಯ ಕಾರ್ಯನಿರ್ವಹಿಸಿ ದ್ವಿತೀಯ ಸ್ಥಾನ, ಎಸ್ ಯು ಜೆ ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನವ್ಯಶ್ರೀ ಸಿ. ರವರು ವಿರೋಧ ಪಕ್ಷದ ನಾಯಕಿಯಾಗಿ ಕಾರ್ಯನಿರ್ವಹಿಸಿ ತೃತೀಯ ಸ್ಥಾನ, ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಪ್ರಭಾವತಿ ಮಹಿಳಾ ಸಚಿವರಾಗಿ ಕಾರ್ಯನಿರ್ವಹಿಸಿ ಸಮಾಧಾನಕರ ಬಹುಮಾನ, ಸರ್ಕಾರಿ ಮಾಜಿ ಪುರಸಭೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಭಾವನಾ ಬಿ. ಸ್ಪೀಕರ್ ಕಾರ್ಯನಿರ್ವಹಿಸಿ ಸಮಾಧಾನಕರ ಬಹುಮಾನ ಪಡೆದುಕೊಂಡರು.