ಬೆಂಗಳೂರು,ಏ.01: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ ಜಯಂತಿ ಇಂದು. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ತಮ್ಮ ನುಡಿ ನಮನ ತಿಳಿಸಿದ್ದಾರೆ.
ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ ಎಂದು ಭರವಸೆ ನೀಡಿದ್ದಾರೆ. ‘ಪರಮಪೂಜ್ಯ ಡಾ. ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ ಮಾನವೀಯ ಸೇವೆಗೆ ಅತ್ಯುನ್ನತ ಉದಾಹರಣೆಯಾಗಿದೆ. ನಮ್ಮ ಸಮಾಜದ ಕುರಿತಾಗಿ ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ’ ಎಂದು ಟ್ವೀಟ್ ಮಾಡಿದ್ದಾರೆ.
ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ…
— Narendra Modi (@narendramodi) April 1, 2024