ಕಮಲ ಪಾಳಯ ಮತ್ತು ಈಶ್ವರಪ್ಪ ಮಧ್ಯೆ ’ಮೋದಿ ಫೋಟೋ’ ಪಾಲಿಟಿಕ್ಸ್

Ravi Talawar
ಕಮಲ ಪಾಳಯ ಮತ್ತು ಈಶ್ವರಪ್ಪ ಮಧ್ಯೆ ’ಮೋದಿ ಫೋಟೋ’ ಪಾಲಿಟಿಕ್ಸ್
WhatsApp Group Join Now
Telegram Group Join Now

ಶಿವಮೊಗ್ಗ, ಏಪ್ರಿಲ್ 6: ಲೋಕಸಭೆ ಚುನಾವಣೆಗೆ  ಶಿವಮೊಗ್ಗ  ಕ್ಷೇತ್ರದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ  ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ರಾಜ್ಯದ ಗಮನ ಸೆಳೆದಿದೆ. ಈ ಮಧ್ಯೆ, ಇದೀಗ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ  ಭಾವಚಿತ್ರ ಬಳಸುವ ವಿಚಾರವಾಗಿ ವಾಕ್ಸಮರ ಆರಂಭಗೊಂಡಿದ್ದು, ಇದೀಗ ಕೋರ್ಟ್ ಮೆಟ್ಟಿಲೇರಿದೆ. ಮೋದಿ ಫೋಟೋ ಬಳಕೆ ವಿಚಾರವಾಗಿ ಶಿವಮೊಗ್ಗ ಕೋರ್ಟ್​​ನಲ್ಲಿ ಈಶ್ವರಪ್ಪ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ.

ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಸಿದ್ದಕ್ಕೆ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವ್ಯಂಗ್ಯವಾಡಿದ್ದರು. ರಾಘವೇಂದ್ರಗೆ ತಿರುಗೇಟು ನೀಡಿದ್ದ ಈಶ್ವರಪ್ಪ, ಮೋದಿ ಅವರಪ್ಪನ ಆಸ್ತಿಯಾ ಎಂದು ಕೌಂಟರ್ ಕೊಟ್ಟಿದ್ದರು. ಇದೀಗ ಮೋದಿ ಫೋಟೋಗಾಗಿ ಕೋರ್ಟ್​ ಮೊರೆಹೋಗಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಈಶ್ವರಪ್ಪ ಅವರನ್ನು ಮನವೊಲಿಸುವುದಕ್ಕಾಗಿ ಇತ್ತೀಚೆಗೆ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಮಾತನಾಡಿದ್ದರು. ದೆಹಲಿಗೆ ಬರುವಂತೆ ತಿಳಿಸಿದ್ದರು. ಅದರಂತೆ ದೆಹಲಿಗೆ ತೆರಳಿದ್ದ ಈಶ್ವರಪ್ಪ, ಭೇಟಿಗೆ ಅವಕಾಶ ಸಿಗದೇ ವಾಪಸ್ ಆಗಿದ್ದರು. ನಂತರ ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, ತಾವು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಕ್ಕೆ ಹೈಕಮಾಂಡ್ ನಾಯಕರ ಸಮ್ಮತಿ ಇರಬಹುದು. ಬಹಿರಂಗವಾಗಿ ಅಲ್ಲವಾದರೂ ಒಳಗಿಂದೊಳಗೆ ಅವರಿಗೆ ಮನಸಿರಬಹುದು. ರಾಜ್ಯದಲ್ಲಿ ಅಪ್ಪ ಮಕ್ಕಳ ಹಿಡಿತದಿಂದ ಪಕ್ಷವನ್ನು ಹೊರ ತರುವುದಕ್ಕಾಗಿ ಅವರು ನನ್ನ ಸ್ಪರ್ಧೆ ಬಗ್ಗೆ ಒಲವು ಹೊಂದಿರಬಹುದು ಎಂದು ಹೇಳಿದ್ದರು.

ಮೋದಿ ಫೋಟೋ ಬಳಕೆ ವಿಚಾರವಾಗಿ ಶಿವಮೊಗ್ಗ ಕೋರ್ಟ್​​ನಲ್ಲಿ ಈಶ್ವರಪ್ಪ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಅಶೋಕ್ ಆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಈಶ್ವರಪ್ಪಗೆ ಮೋದಿ ಫೋಟೋ ಬಳಕೆ ಮಾಡಿಕೊಳ್ಳುವ ಅಧಿಕಾರವಿಲ್ಲ. ಅವರು ಬಳಕೆ ಮಾಡಿದರೆ ಅದು ತಪ್ಪು. ಸರ್ಕಾರಿ ಕಾರ್ಯಕ್ರಮ ಆಗಿದ್ದರೆ ಪ್ರಧಾನಿ ಆಗಿರುವುದರಿಂದ ಮೋದಿ ಫೋಟೊ ಬಳಸಿಕೊಳ್ಳಬಹುದು. ಆದರೆ, ರಾಜಕೀಯವಾಗಿ ಚುನಾವಣೆ ವೇಳೆ‌ ಬಿಜೆಪಿಗೆ ಮಾತ್ರ ಮೋದಿ ಫೋಟೊ ಬಳಕೆಗೆ ಅಧಿಕಾರ ಇದೆ. ಈಶ್ವರಪ್ಪ ಅನಧಿಕೃತವಾಗಿ ಮೋದಿಯವರ ಫೋಟೋ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ನಾಮಪತ್ರ ಸಲ್ಲಿಸಿದ ಬಳಿಕ ಅದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಶೋಕ್ ಹೇಳಿದರು.

 

WhatsApp Group Join Now
Telegram Group Join Now
Share This Article