Ad imageAd image

ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಸಖಿಯರಿಗೆ ಮಾಡ್ಯುಲ್-2 ತರಬೇತಿ

Ravi Talawar
ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಸಖಿಯರಿಗೆ ಮಾಡ್ಯುಲ್-2 ತರಬೇತಿ
WhatsApp Group Join Now
Telegram Group Join Now

ನೇಸರಗಿ-ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,  ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ, ಬೆಳಗಾವಿ ಮತ್ತು ಐಸಿಎಆರ್-ಕೆಎಲ್‌ಇ ಕೃಷಿ
ವಿಜ್ಞಾನ ಕೇಂದ್ರ, ಮತ್ತಿಕೊಪ್ಪ ಇವರ  ಸಂಯುಕ್ತಾಶ್ರಯದಲ್ಲಿ ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಕೃಷಿ
ಸಖಿಯರಿಗೆ ಪರಿಸರ ಕೃಷಿ ವಿಧಾನಗಳ ಕುರಿತು ಐದು ದಿನಗಳ ಮಾಡ್ಯುಲ್-೨ ತರಬೇತಿ ಕಾರ್ಯಕ್ರಮವನ್ನು ಸಮೀಪದ ಮತ್ತಿಕೊಪ್ಪದ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಪ್ರಾರಂಭಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಮಂಜುನಾಥ ಚೌರಡ್ಡಿ ಮಾತನಾಡಿ, ಕೃಷಿ ಸಖಿ ಎಂದರೆ ವ್ಯವಸಾಯದಲ್ಲಿ ರೈತರಿಗೆ ಸಹಕಾರ ನೀಡಿ ಕೃಷಿಯನ್ನು ಲಾಭದಾಯಕವಾಗಿ ನಡೆಯುವಂತೆ
ಮಾರ್ಗದರ್ಶನ ಮಾಡುವ ಜವಾಬ್ದಾರಿಯನ್ನು ಹೊಂದಿರುವ ಮಹಿಳೆಯರಿಗೆ ಕೃಷಿ ಸಖಿಯರು ಎನ್ನಬಹುದು. ಕೃಷಿ ಸಖಿಯು ಕರ್ನಾಟಕ ಸರ್ಕಾರದ ಪ್ರತಿಪ್ಠಿತ ಸಂಜೀವಿನಿ- ಕರ್ನಾಟಕರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪರಿಕಲ್ಪನೆಯಾಗಿದೆ.

ಕೃಷಿಯನ್ನು ಲಾಭದಾಯಕವಾಗಿ ಮಾಡಲು ಹಾಗೂ ರೈತನ ಆದಾಯವನ್ನು ಹೆಚ್ಚಿಸಲು ರೈತರಿಗೆ ತಂತ್ರಜ್ಞಾನದ ಮಾರ್ಗದರ್ಶನ ಮಾಡುವುದು ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಕೃಷಿ ಸಖಿಯರು ತಾಂತ್ರಿಕ ಜ್ಞಾನ ಪಡೆಯಲು ಐದು ದಿನಗಳ ತರಬೇತಿಯನ್ನು ಆಯೋಜಿಸಲಾಗಿದ್ದು, ಕೇಂದ್ರದಲ್ಲಿ ಅನುಭವಿ ವಿಜ್ಞಾನಿಗಳ ತಂಡವಿದ್ದು ಕೃಷಿ ಸಖಿಯರು  ರೈತರ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲು  ಕೇಂದ್ರದ ವಿಜ್ಞಾನಿಗಳೊಂದಿಗೆ ನಿರಂತರ ಸಂಪರ್ಕಸಾಧಿಸಿ ರೈತರಿಗೆ ಸೇವೆ ಒದಗಿಸಬೇಕೆಂದು ಕರೆ ನೀಡಿದರು.

ತರಬೇತಿ ಕಾರ್ಯಕ್ರಮವನ್ನು ಬೆಳಗಾವಿ ಜಿಲ್ಲಾ  ಪಂಚಾಯತ ಯೋಜನಾ ನಿರ್ದೇಶಕರಾದ ರವಿ ಎನ್. ಬಂಗಾರೆಪ್ಪನವರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕೃಷಿಯಲ್ಲಿ ತಂತ್ರಜ್ಞಾನದ ಮಾಹಿತಿ ಹಾಗೂ ಯೋಜನೆಗಳ ಕುರಿತು ರೈತರಿಗೆ ಮಾಹಿತಿ ತಲುಪಿಸಲು ಕೃಷಿ ಸಖಿಯರಿಗೆ ಇತ್ತಿಚೀನ ಕೃಷಿ ತಂತ್ರಜ್ಞಾನಗಳ ಕುರಿತು ತರಬೇತಿ ನೀಡಲಾಗುತ್ತಿದೆ. ಶಿಬಿರಾರ್ಥಿಗಳು
ತರಬೇತಿ ನಂತರದಲ್ಲಿ ರೈತರಿಗೆ ಸೂಕ್ತ ಮಾರ್ಗದರ್ಶನ ಮಾಡುವುದರ ಮೂಲಕ ಕೃಷಿ ಪರಿಸರ ವ್ಯವಸ್ಥೆಯ ಆದಾಯವನ್ನು ಅಧಿಕಗೊಳಿಸಲು ಶ್ರಮಿಸಬೇಕೆಂದು ಸಲಹೆ ನೀಡಿದರು.

ಕೇಂದ್ರದ ಮಣ್ಣು ವಿಜ್ಞಾನಿ ಎಸ್. ಎಮ್. ವಾರದ  ಪ್ರಾಸ್ತಾವಿಕ ಮಾತನಾಡಿ, ಕೃಷಿ ಸಖಿಯರು ರೈತರು ಮತ್ತು ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸುವರು. ಈ ನಿಟ್ಟಿನಲ್ಲಿ ಅವರ ತಾಂತ್ರಿಕ
ಸಾಮರ್ಥ್ಯವನ್ನು ಬಲಪಡಿಸಲು ಅನೇಕ ಮುಂದುವರೆದ ಕೃಷಿ ತಾಂತ್ರಿಕತೆಗಳ ಕುರಿತು ತರಬೇತಿ ನಡೆಸಲಾಗುತ್ತಿದೆ. ಕೇಂದ್ರದ ವಿಜ್ಞಾನಿಗಳು ಹಾಗೂ ಕೃಷಿ/ತೋಟಗಾರಿಕೆ ವಿಶ್ವವಿದ್ಯಾಲಯದ ವಿಜ್ಞಾನಿಗಳು ಕೃಷಿ ಉತ್ಪಾದನೆ ಮತ್ತು ರೈತರ ಆದಾಯವನ್ನು ಹೆಚ್ಚಿಸಲು ಪೂರಕವಾದ ತಂತ್ರಜ್ಞಾನಗಳನ್ನು ಮನವರಿಕೆ ಮಾಡುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರದ ವಿಜ್ಞಾನಿ ಡಾ. ಎಸ್. ಎಸ್. ಹಿರೇಮಠ ಸ್ವಾಗತಿಸಿದರು ಹಾಗೂ ಪ್ರವೀಣ ಯಡಹಳ್ಳಿ ನಿರೂಪಿಸಿ ವಂದಿಸಿದರು. ಗ್ರಾಮೀಣ ಜೀವನೋಪಾಯ ಯೋಜನೆಯ ಜಿಲ್ಲಾ ಮ್ಯಾನೇಜರ್ ಕಿರಣ, ವಿಜ್ಞಾನಿ ಶ್ರೀದೇವಿ ಬ. ಅಂಗಡಿ, ಶಂಕರಗೌಡ ಪಾಟೀಲ ಉಪಸ್ಥಿತರಿದ್ದರು. ತರಬೇತಿಯಲ್ಲಿ ಬೆಳಗಾವಿ, ಕಿತ್ತೂರ,  ಬೈಲಹೊಂಗಲ ಹಾಗೂ ನಿಪ್ಪಾಣಿ ತಾಲೂಕಿನ ಕೃಷಿ
ಸಖಿಯರು ಭಾಗವಹಿಸುತ್ತಿರುವರು.

WhatsApp Group Join Now
Telegram Group Join Now
Share This Article