ಭಾರತೀಯರಲ್ಲಿ ಭ್ರಾತೃತ್ವತೆ ಮುಖ್ಯ: ಮೋಹನ್ ಕುಮಾರ್

Sandeep Malannavar
ಭಾರತೀಯರಲ್ಲಿ ಭ್ರಾತೃತ್ವತೆ ಮುಖ್ಯ: ಮೋಹನ್ ಕುಮಾರ್
WhatsApp Group Join Now
Telegram Group Join Now

ಬಳ್ಳಾರಿ,ಜ.31-ಭಾರತೀಯರಲ್ಲಿ ಪರಸ್ಪರ ಭ್ರಾತೃತ್ವ ಸಂಬAಧವಿರದಿದ್ದರೆ ದೇಶವು ಪ್ರಜಾಸತ್ತಾತ್ಮಕವಾಗಿ ಉಳಿಯುವುದಿಲ್ಲ ಎಂಬುದು ಬಾಬಾ ಸಾಹೇಬ ಅಂಬೇಡ್ಕರ್ ಅವರ ನಿಲುವಾಗಿತ್ತು ಎಂದು ಹೈಕೋರ್ಟ್ ವಕೀಲರಾದ ಎಚ್.ಮೋಹನ್ ಕುಮಾರ್ ಹೇಳಿದರು.
ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ ಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ವಿವಿಯ ಡಾ.ಬಿ.ಆರ್ ಅಂಬೇಡ್ಕರ್ ತರಬೇತಿ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಹಾಗೂ ಮೈಸೂರಿನ ಸಮಾಜ ಕಾರ್ಯಕರ್ತರ ಕ್ರಿಯಾ ಸಂಶೋಧನೆ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಅಂಬೇಡ್ಕರ ಅವರ ಬರಹಗಳು ಮತ್ತು ಭಾಷಣಗಳ ಮೂಲಕ ಭಾರತೀಯರನ್ನು ಅರ್ಥಮಾಡಿಕೊಳ್ಳುವಿಕೆ’ ಎಂಬುದರ ಕುರಿತಾದ ಮೂರು ದಿನಗಳ ಕಾರ್ಯಾಗಾರವನ್ನು ಅಂಬೇಡ್ಕರ್ ಹಾಗೂ ಬುದ್ಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜದಲ್ಲಿ ಪ್ರಸ್ತುತವಾಗಿ ಅಂಬೇಡ್ಕರ ಅವರ ಕುರಿತು ಚಿಂತನೆಗಳು ಬಹಳ ಕ್ರಿಯಾಶೀಲವಾಗಿವೆ. ಮನುಷ್ಯನು ಇನ್ನೊಬ್ಬರ ಘನತೆಯನ್ನು ಅಳೆಯುವುದರಲ್ಲಿ ತಲ್ಲೀನನಾಗಿದ್ದಾನೆ. ಪ್ರಜಾಪ್ರಭುತ್ವ ಕೇವಲ ಹೊಗಳಿಕೆಯಾಗಿ ಉಳಿದಿದೆ. ಇವತ್ತು ಪ್ರಾಣಿಗಳ ಮೇಲೆ ಕಾಣುವ ಪ್ರೀತಿ, ಸಹೋದರತೆ, ವಿಶ್ವಾಸವನ್ನು ಮನುಷ್ಯರಲ್ಲಿ ಕಾಣಲಾರೆವು ಎಂದು ಅಭಿಪ್ರಾಯಪಟ್ಟರು.
ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಶ್ರೀನಿವಾಸ ಡಿ.ಮನಗಳ್ಳಿ ಅವರು ಮಾತನಾಡಿ, ಅಂಬೇಡ್ಕರ ಅವರ ಅಧ್ಯಯನ ಕೇಂದ್ರಗಳು ತರಬೇತಿ ಕೇಂದ್ರಗಳಾಗಬೇಕಾಗಿದೆ. ಸಮಾಜದಲ್ಲಿನ ಜಾತಿ ವ್ಯವಸ್ಥೆ ಭಾರತದ ಅಭಿವೃದ್ಧಿಗೆ ಮಾರಕವಾಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಸಂಯೋಜಕರು ಮತ್ತು ಡಾ.ಬಿ.ಆರ್ ಅಂಬೇಡ್ಕರ್ ತರಬೇತಿ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕರಾದ ಪ್ರೊ.ಗೌರಿ ಮಾಣಿಕ್ ಮಾನಸ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಬಾ ಸಾಹೇಬರ ಕನಸುಗಳನ್ನು ಸಾಕಾರಗೊಳಿಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ಮುಂಬರುವ ದಿನಗಳಲ್ಲಿ ವಿವಿಯಲ್ಲಿ ಎಸ್ಸಿ-ಎಸ್ಟಿ ಕೋಶ ಹಾಗೂ ಅಂಬೇಡ್ಕರ ತರಬೇತಿ ಕೇಂದ್ರ ಸಹಭಾಗಿತ್ವದಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಲಂಡನ್‌ನ ಸಾಮಾಜಿಕ ಮತ್ತು ಸಾಂಸ್ಕೃತಿಕ ಮನೋವಿಜ್ಞಾನ ಚಿಂತಕರಾದ ಚಾರುಮತಿ.ಎಂ ವೇದಿಕೆಯಲ್ಲಿದ್ದರು. ಎಸ್ಸಿ-ಎಸ್ಟಿ ಕೋಶದ ನಿರ್ದೇಶಕ ಡಾ.ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಅನಿಲ ವಂದಿಸಿದರು.
ವಿಶ್ವವಿದ್ಯಾಲಯದ ವಿವಿಧ ನಿಕಾಯಗಳ ಡೀನರು, ಮುಖ್ಯಸ್ಥರುಗಳು, ಬೋಧಕ-ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ಇದ್ದರು.

WhatsApp Group Join Now
Telegram Group Join Now
Share This Article