ಮೋಹನ್ ಲಾಲ್  ಚಿತ್ರ  ವೃಷಭ  ಕ್ರಿಸ್ಮಸ್ ಗೆ  

Ravi Talawar
ಮೋಹನ್ ಲಾಲ್  ಚಿತ್ರ  ವೃಷಭ  ಕ್ರಿಸ್ಮಸ್ ಗೆ  
WhatsApp Group Join Now
Telegram Group Join Now
     ಕನ್ನಡ ನಿರ್ದೇಶಕ ನಂದ ಕಿಶೋರ್ ನಿರ್ದೇಶನ ಮಾಡಿರುವ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಹೀರೋ ಆಗಿ ನಟಿಸಿರುವ ‘ವೃಷಭ’ ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಕ್ರಿಸ್ಮಸ್ ಗೆ ‘ವೃಷಭ’ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ.
     ಮೋಹನ್‌ಲಾಲ್ ಅಭಿನಯದ ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ತೆಲುಗು ಮತ್ತು ಮಲೆಯಾಳಂ ಭಾಷೆಯಲ್ಲಿ ಈ ಸಿನಿಮಾ ತಯಾರಾಗಿದೆ. ಆದರೆ, ಬೇರೆಲ್ಲಾ ಭಾಷೆಯಲ್ಲಿ ಇದು ಡಬ್ ಆಗುತ್ತಿದೆ. ಈ ಮೂಲಕ ಎಲ್ಲ ಭಾಷೆಯ ಸಿನಿಮಾ ಪ್ರೇಮಿಗಳು ಈ ಚಿತ್ರ ನೋಡಬಹುದು.
     ‘ವೃಷಭ’ ಚಿತ್ರದಲ್ಲಿ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಕೂಡ ಇದ್ದಾರೆ. ಮೋಹನ್‌ಲಾಲ್ ಮಗನ ಪಾತ್ರವನ್ನೆ ಮಾಡಿದ್ದಾರೆ. ರಾಗಿಣಿ ದ್ವಿವೇದಿ, ಮತ್ತು ನಯನ್ ಸಾರಿಕಾ, ಅಜಯ್ ಮತ್ತು ನೇಹಾ ಸಕ್ಸೇನಾ ತಾರಾಬಳಗದಲ್ಲಿದ್ದಾರೆ.
     ‘ವೃಷಭ’ ಚಿತ್ರಕ್ಕೆ ಸ್ಯಾಮ್ ಸಿಎಸ್ ಸಂಗೀತ ನಿರ್ದೇಶನ ಮಾಡಿದ್ದಾರೆ. ರೆಸುಲ್ ಪೂಕುಕ್ಯೂ ಸೌಂಡ್ ಡಿಸೈನ್ ಮಾಡಿದ್ದಾರೆ. ಜನಾರ್ಧನ್ ಮಹರ್ಷಿ ಹಾಗೂ ಕಾರ್ತಿಕ್ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.ಪೀಟರ್ ಹೈನ್, ಸ್ಟಂಟ್ ಸಿಲ್ವಾ ಹಾಗೂ ನಿಖಿಲ್ ಸಾಹಸ ನಿರ್ದೇಶನವಿದೆ.
     ಕನೆಕ್ಟ್ ಮೀಡಿಯಾ ಮತ್ತು ಬಾಲಾಜಿ ಟೆಲಿಫಿಲ್ಮ್ಸ್, ಅಭಿಷೇಕ್ ಎಸ್ ವ್ಯಾಸ್ ಸ್ಟುಡಿಯೋಸ್ ಜೊತೆಗೂಡಿ ಪ್ರಸ್ತುತಪಡಿಸುತ್ತಿರುವ `ವೃಷಭ’ ಚಿತ್ರವನ್ನು ಶೋಭಾ ಕಪೂರ್, ಏಕ್ತಾ ಕಪೂರ್, ಸಿ.ಕೆ.ಪದ್ಮ ಕುಮಾರ್, ವರುಣ್ ಮಾಥುರ್, ಸೌರಭ್ ಮಿಶ್ರಾ, ಅಭಿಷೇಕ್ ಎಸ್ ವ್ಯಾಸ್, ಪ್ರವೀರ್ ಸಿಂಗ್, ವಿಶಾಲ್ ಗುರ್ನಾನಿ ಮತ್ತು ಜೂಹಿ ಪರೇಖ್ ಮೆಹ್ತಾ ನಿರ್ಮಿಸಿದ್ದಾರೆ.
     ಭಾರೀ ಬಜೆಟ್ ನಲ್ಲಿ ನಿರ್ಮಿಸಿರುವ ‘ವೃಷಭ’ ಸಿನಿಮಾದಲ್ಲಿ ಗ್ರಾಫಿಕ್ಸ್ ಹೆಚ್ಚು ಒತ್ತು ನೀಡಲಾಗಿದೆ. ಗುಣಮಟ್ಟದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಪ್ರೇಕ್ಷ
WhatsApp Group Join Now
Telegram Group Join Now
Share This Article