ರಾಮನಗರ(ಉತ್ತರಾಖಂಡ): ಚಾಲಕನ ನಿಯಂತ್ರಣ ತಪ್ಪಿದ ಬಸ್, ಕಂದಕಕ್ಕೆ ಉರುಳಿಬಿದ್ದು ಕನಿಷ್ಠ 30ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟ ಘಟನೆ ಉತ್ತರಾಖಂಡದ ಅಲ್ಮೋರಾದಲ್ಲಿ ಇಂದು ಬೆಳಗ್ಗೆ ನಡೆದಿದೆ. ಇಲ್ಲಿನ ಸುಲ್ಟ್ ತಹಸಿಲ್ನ ಮಾರ್ಚುಲಾ ಕುಪಿ ಗ್ರಾಮದ ಬಳಿ ದುರಂತ ಸಂಭವಿಸಿತು. ಬಸ್ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪೂರ್ಣ ವಿವರ: ಸೋಮವಾರ ಬೆಳಗ್ಗೆ ಬಸ್ ರಾಮನಗರದಿಂದ ರಾಣಿಖೇತ್ ಕಡೆಗೆ ಹೋಗುತ್ತಿತ್ತು. ಮಾರ್ಗಮಧ್ಯೆ ಹಠಾತ್ ನಿಯಂತ್ರಣ ಕಳೆದುಕೊಂಡ ಬಸ್, 200 ಮೀಟರ್ ಆಳದ ಕಂದಕಕ್ಕೆ ಬಿದ್ದಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಪಘಾತದಲ್ಲಿ ಮಡಿದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಏರ್ ಲಿಫ್ಟ್ ಮಾಡಲು ಸೂಚನೆ ನೀಡಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.