ಗದಗ : ತಾಯಿಗಿಂತ ದೊಡ್ಡವರು ಯಾರೂ ಇಲ್ಲ. ತಾಯಿಯಿಂದ ಸಂಸ್ಕಾರ ಮತ್ತು ಪಾಠ ಕಲಿತವರೇ ಧನ್ಯರು. ಹುಟ್ಟಿದ ಶಿಶುವಿಗೆ ತಾಯಿಯೇ ಮೊದಲ ಗುರು ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಮಾತನಾಡಿದರು.
ಲಿಂಗಾಯತ ಪ್ರಗತಿಶೀಲ ಸಂಘದ ೨೬೯೫ನೆಯ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಉಪ್ಪಿಗಿಂತ ರುಚಿಯಿಲ್ಲ ತಾಯಿಗಿಂತ ಬಂಧುವಿಲ್ಲ ಎಂಬ ಮಾತನ್ನು ಉಲ್ಲೇಖಿಸಿ ಉಪ್ಪಿನ ರುಚಿಯನ್ನು ಯಾವ ವಸ್ತುವೂ ಕೊಡಲು ಸಾಧ್ಯವಿಲ್ಲ. ಅದೇ ರೀತಿ ತಾಯಿಯ ಸ್ಥಾನವನ್ನೂ ಯಾರೂ ತುಂಬಲಿಕ್ಕೆ ಸಾಧ್ಯವಿಲ್ಲ. ತಾಯಿಯ ಸ್ಥಾನ ಬಹಳಷ್ಟು ಮಹತ್ವದ್ದಾಗಿದೆ.
ಅಂತಃಕರಣ, ವಾತ್ಸಲ್ಯ, ಪ್ರೀತಿ, ದಯೆ ತಾಯಿಯಲ್ಲಿರುವ ವಿಶೇಷ ಗುಣಗಳು. ಪ್ರಾಚೀನ ಕಾಲದಿಂದಲೂ ತಂದೆ ತಾಯಿಗಳನ್ನು ಗೌರವಿಸುವ ಸಂಸ್ಕೃತಿ ನಮ್ಮದು. ಮಕ್ಕಳೂ ಸಹಿತ ತಂದೆ ತಾಯಿಗಳನ್ನು ವೃದ್ಧಾಶ್ರಮಕ್ಕೆ ತಳ್ಳದೇ ಪಾಲನೆ ಪೋಷಣೆ ಸಂರಕ್ಷಣೆ ಮಾಡಬೇಕು. ಹೆಣ್ಣುಮಕ್ಕಳಿಗಾಗಿಯೇ ಸರಕಾರದ ಇಲಾಖೆ ಮತ್ತು ಸಬಲೀಕರಣಕ್ಕಾಗಿ ವಿಶೇಷ ಯೋಜನೆಗಳು ಜಾರಿಯಲ್ಲಿವೆ.
ಸಮಾಜದಲ್ಲಿ ಹೆಣ್ಣುಮಕ್ಕಳು ಬೆಳೆಯಲು ಸಾಕಷ್ಟು ಅವಕಾಶಗಳಿದ್ದು, ಉಪಯೋಗ ಮಾಡಿಕೊಳ್ಳಬೇಕು ಎಂದು ಶ್ರೀಗಳು ತಿಳಿಸಿದರು.
ಅವ್ವನ ಮಮತೆ ವಿಷಯ ಕುರಿತು ಡಾ. ತೇಜಸ್ವಿನಿ ಹಿರೇಮಠ, ಸ್ತ್ರೀರೋಗ ತಜ್ಞರು, ಸೌಖ್ಯದಾ ಆಸ್ಪತ್ರೆ, ಗದಗ ಅವರು ಉಪನ್ಯಾಸ ನೀಡಿ, ತ್ಯಾಯಿಯ ತ್ಯಾಗ ದೊಡ್ಡದು. ತಾಯಿಯ ಋಣ ತೀರಿಸಲು ಸಾಧ್ಯವಿಲ್ಲ. ಹೆಣ್ಣಿಗೆ ಪ್ರೆಗ್ನೇಸಿ, ಮುಟ್ಟಿನ ಸಮಸ್ಯೆ, ರಕ್ತನಹೀನತೆ, ಮಾನಸಿಕ ದೌರ್ಬಲ್ಯಗಳು ಅನೇಕ ಸಮಸ್ಯೆಗಳು ಕಾಡುತ್ತಿರುತ್ತವೆ. ಈ ಸಮಯದಲ್ಲಿ ಪರಿವಾರದವರ ಸಹಾಯ, ಸಹಕಾರ, ಕಾಳಜಿ ಬಹಳ ಅವಶ್ಯ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಸಮಾಜದಲ್ಲಿ ಹೆಣ್ಣು ಅಂದರೆ ನಿರ್ಲಕ್ಷ್ಯಭಾವ ಇದೆ. ಆ ಭಾವ
ತೊರೆದು ಪ್ರತಿಹಂತದಲ್ಲೂ ಸ್ಪಂದನೆ, ಪ್ರೋತ್ಸಾಹ ಲಭಿಸಬೇಕು ಎಂದು ಅಭಿಪ್ರಾಯಪಟ್ಟರು.
ಶರಣೆ ಗಿರಿಜಕ್ಕ ಧರ್ಮರೆಡ್ಡಿ ಅವರು ಲಿಂಗೈಕ್ಯ ಡಾ. ಅಕ್ಕ ಅನ್ನಪೂರ್ಣ ತಾಯಿ ಬೀದರ ಅವರಿಗೆ ನುಡಿನಮನ ಸಲ್ಲಿಸಿದರು. ವಿಶ್ವತಾಯಂದಿರ ದಿನಾಚರಣೆ ಅಂಗವಾಗಿ ರತ್ನವ್ವ ಚನ್ನವೀರಪ್ಪ ಕ್ಯಾಡದ, ಮಹಾದೇವಿ ಈಶ್ವರಪ್ಪ ಅರಳಿ, ಜ್ಯೋತಿ ಅಶೋಕ ಅಗಸನಕೊಪ್ಪ, ಅವರನ್ನು ಪೂಜ್ಯರು ಸಂಮಾನಿಸಿದರು.
ಗುರುನಾಥ ಸುತಾರ, ಅಶೋಕ ಸುತಾರ, ಕುಮಾರಸ್ವಾಮಿ ಹಿರೇಮಠ ತಂಡದವರು ವಚನ ಸಂಗೀತ ಹಾಡಿದರು. ಧರ್ಮಗ್ರಂಥ ಪಠಣವನ್ನು ಕು. ಅರಮಾನ ಎಂ. ನಾಗನೂರ, ವಚನ ಚಿಂತನೆಯನ್ನು ಕು. ಸಾಕೀಬ್ ಎನ್. ನಾಗನೂರ ಇವರು ಮಾಡಿದರು.
ಶಿವಾನುಭವದ ದಾಸೋಹ ಭಕ್ತಿಸೇವೆಯನ್ನು ವಹಿಸಕೊಂಡಿದ್ದ ಮಲ್ಲಪ್ಪ ದ್ಯಾಮಪ್ಪ ಕಾಬಳ್ಳಿ, ಪ್ರಭು ಮೆಡಿಕಲ್ಸ್ ಗದಗ
ಅವರನ್ನು ಪೂಜ್ಯರು ಸಂಮಾನಿಸಿದರು.
ಸರ್ವರನ್ನು ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷರಾದ ಶೇಖಣ್ಣ ಕಳಸಾಪೂರ ಸ್ವಾಗತಿಸಿದರು. ರತ್ನಕ್ಕ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಬಾಲಚಂದ್ರ ಭರಮಗೌಡರ, ರೇಣುಕಾ ವಿ. ಕರೇಗೌಡ್ರ, ಕಾರ್ಯದರ್ಶಿ ಮಹೇಶ ಗಾಣಿಗೇರ, ಸಹಕಾರ್ಯದರ್ಶಿ ವಿಜಯಕುಮಾರ ಹಿರೇಮಠ, ವಿರುಪಾಕ್ಷಪ್ಪ ಅರಳಿ, ಸಂಘಟನಾ ಕಾರ್ಯದರ್ಶಿ ಅಶೋಕ ಹಾದಿ,
ಕೋಶಾಧ್ಯಕ್ಷ ಸುರೇಶ ನಿಲೂಗಲ್, ಶಿವಾನುಭವ ಸಮಿತಿ ಚೇರಮನ್‌ರಾದ ವಿವೇಕಾನಂದಗೌಡ ಪಾಟೀಲ ಉಪಸ್ಥಿತರಿದ್ದರು.
ಪೋಟೋಕ್ಯಾಪ್ಸನ್ ೧ : ವಿಶ್ವತಾಯಂದಿರ ದಿನಾಚರಣೆ ಅಂಗವಾಗಿ ರತ್ನವ್ವ ಚನ್ನವೀರಪ್ಪ ಕ್ಯಾಡದ, ಮಹಾದೇವಿ ಈಶ್ವರಪ್ಪ ಅರಳಿ, ಜ್ಯೋತಿ ಅಶೋಕ ಅಗಸನಕೊಪ್ಪ, ಅವರನ್ನು ಪೂಜ್ಯರು ಸಂಮಾನಿಸಿದರು.
ಮಾನ್ಯ ಸಂಪಾದಕರಲ್ಲಿ ವಿನಂತಿ ಮೇಲ್ಕಾಣಿಸಿದ ವಿಷಯವನ್ನು ಸುದ್ಧಿ ಅಂತಾ ತಮ್ಮ ಜನಪ್ರಿಯ ದಿನಪತ್ರಿಕೆಯಲ್ಲಿ ಪ್ರಕಟಿಸಲು ಕೋರಿದೆ.