ಹಸಿರು ಕ್ರಾಂತಿ: ಎಂ. ಕೆ. ಹುಬ್ಬಳ್ಳಿ: ಸಮೀಪದ ಚ. ಕಿತ್ತೂರಿನಲ್ಲಿ ಹಾಗೂ ಪಟ್ಟಣದಲ್ಲಿ ಈ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಹಾಗೂ ಪರೀಕ್ಷಾ ಭಯ, ಆತ್ಮವಿಶ್ವಾಸ ಹೆಚ್ಚಿಸಲು ಅಭಿಪ್ರೇರಣಾ ಕಾರ್ಯಾಗಾರ ಮೈಸೂರಿನ ಖ್ಯಾತ ಸಂಪನ್ಮೂಲ ವ್ಯಕ್ತಿ ಆರ್.ಎ.ಚೇತನರಾಮ ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಚ. ಕಿತ್ತೂರಿನ ರಾಣಿ ಚನ್ನಮ್ಮ ಸಭಾ ಭವನದಲ್ಲಿ ನ. 22 ರಂದು 10 ಗಂಟೆಗೆ ಆಯೋಜಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವೈ. ತುಬಾಕಿ ತಿಳಿಸಿದರು.
ಸುದ್ದಿಗಾರರೊಂದಿಗೆ ಕಿತ್ತೂರು ಬಿಇಓ ಮಾತನಾಡಿ, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷೆ ಒಂದು ಹಬ್ಬ ಎಂಬ ಕಾರ್ಯಾಗಾರ ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ರಾಜ ಗುರು ಸಂಸ್ಥಾನ ಕಲ್ಮಠದ ಮಡಿವಾಳರಾಜಯೋಗಿಂದ್ರ ಸ್ವಾಮೀಜಿ ಸಾನಿಧ್ಯವಹಿಸುವರು. ಶಾಸಕ ಬಾಬಾಸಾಹೇಬ ಪಾಟೀಲ, ಡಿಡಿಪಿ ಲೀಲಾವತಿ ಹಿರೇಮಠ, ಡೈಟ್ ಪ್ರಾಚಾರ್ಯ ಬಿ.ಎಂ. ನಾಲತ್ತವಾಡ, ತಹಶೀಲ್ದಾರ ಕಲಗೌಡ ಪಾಟೀಲ, ತಾಪಂ ಇಒ ನಿಂಗಪ್ಪ ಮಸಳಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ತಾಲೂಕಿನ ಎಲ್ಲ ಸಂಪನ್ಮೂಲ ವ್ಯಕ್ತಿಗಳು, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಸೇರಿದಂತೆ 10ನೇ ತರಗತಿಯ 2500 ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿರುವರು. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಾಲಕರು ಶಿಕ್ಷಕರು ಪಡೆದುಕೊಳ್ಳಬೇಕೆಂದು ಹೇಳಿದರು.
ನ 22 ರಂದು ಮದ್ಯಾಹ್ನ 2 ಘಂಟೆಯಿಂದ ಸಂಜೆ 5 ಘಂಟೆಯವರೆಗೆ ಅಭಿಪ್ರೇರಣಾ ಕಾರ್ಯಾಗಾರ ಪಟ್ಟಣದ ಕಲ್ಲೇಶ್ವರ ಪದವಿಪೂರ್ವ ಮಹಾವಿದ್ಯಾಲಯದಲ್ಲಿಯೂ ಕಾರ್ಯಾಗಾರ ನಡೆಯಲಿದೆ ಎಂದು ತಿಳಿಸಿದರು.


