ಬಳ್ಳಾರಿಯನ್ನು ದೇಶದ ಮಾರುಕಟ್ಟೆಯ ಎರಡನೆಯ ಹಬ್ ಮಾಡಲು ಪ್ರಯತ್ನ : ಸಂಸದ ಇ. ತುಕಾರಾಂ

Pratibha Boi
ಬಳ್ಳಾರಿಯನ್ನು ದೇಶದ ಮಾರುಕಟ್ಟೆಯ ಎರಡನೆಯ ಹಬ್ ಮಾಡಲು ಪ್ರಯತ್ನ : ಸಂಸದ ಇ. ತುಕಾರಾಂ
WhatsApp Group Join Now
Telegram Group Join Now
ಬಳ್ಳಾರಿ, ಆ. 28:ಬಳ್ಳಾರಿಯನ್ನು ದೇಶದ ಮಾರುಕಟ್ಟೆಯ ಎರಡನೆಯ ಹಬ್ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳು ನಡೆಯುತ್ತಿವೆ ಎಂದು ಸಂಸದ ಇ. ತುಕಾರಾಂ ಅವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನವೀಕೃತ ಕಟ್ಟಡ, ಲಿಫ್ಟ್ ಅನ್ನು ಗುರುವಾರ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಬಳ್ಳಾರಿ ಜಿಲ್ಲೆಯು ಭೌಗೋಳಿಕವಾಗಿ ಭಿನ್ನವಾಗಿದೆ. ಸಂಡೂರು ತಾಲೂಕಿನಲ್ಲಿ ಮ್ಯಾಂಗನೀಸ್, ಕಬ್ಬಿಣದ ಅದಿರು, ಕಂಪ್ಲಿ, ಕುರುಗೋಡು ಮತ್ತು ಸಿರುಗುಪ್ಪ ತಾಲೂಕಿನಲ್ಲಿ ತುಂಗಭದ್ರಾ ನದಿ ಮತ್ತು ನೀರಿದೆ. ಕಾರಣ ಬಳ್ಳಾರಿಯನ್ನು ಸಹಜವಾಗಿಯೇ ಬಾಂಬೆಯ ನಂತರ, ದೇಶದ ಎರಡನೇ `ಮಾರ್ಕೆಟಿಂಗ್ ಹಬ್’ ಮಾಡುವ ಪ್ರಯತ್ನ ನಡೆದಿದೆ ಎಂದರು.
ಹೊಸಪೇಟೆ – ಬಳ್ಳಾರಿಗೆ ಹೆಚ್ಚುವರಿ ಗೂಡ್ಸ್ ಮಾರ್ಗಕ್ಕೆ ಅನುಮೋದನೆ ಸಿಕ್ಕಿದ್ದು, ಈ ಮಾರ್ಗ ನಿರ್ಮಾಣದ ಸಂದರ್ಭದಲ್ಲಿ ಅನೇಕ ರೈಲ್ವ ಮೇಲು ಸೇತುವೆಗಳ ನಿರ್ಮಾಣವೂ ಆಗಲಿದೆ. ಬಳ್ಳಾರಿಯ ಸುಧಾ ಸರ್ಕಲ್, ರೇಡಿಯೋಪಾರ್ಕ್, ಟ್ರಾಮಾಕೇರ್, ಸೂಪರ್ ಸ್ಪೆಷಾಲಿಟಿ, ಅತ್ಯಾಧುನಿಕ ಆಂಬುಲೆನ್ಸ್, ಬಿಮ್ಸ್ ಆಸ್ಪತ್ರೆ, ಎಂಆರ್‌ಐ ಯಂತ್ರ ಹೀಗೇ ಅನೇಕ ಅಭಿವೃದ್ಧಿ ಕೆಲಸಗಳನ್ನು ಪ್ರಸ್ತಾಪಿಸಿದ ಸಂಸದ ಇ. ತುಕಾರಾಂ, ವೇಣಿವೀರಾಪುರ – ಹಗರಿ, ಹಗರಿಯಿಂದ ಸಿರುಗುಪ್ಪ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಿ ಕಾಮಗಾರಿಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತದೆ ಎಂದರು.
ರಾಜ್ಯಸಭಾ ಸದಸ್ಯ ಡಾ. ಸಯ್ಯದ್ ನಾಸಿರ್ ಹುಸೇನ್ ಅವರು, ಬಳ್ಳಾರಿ ನನ್ನ ಹುಟ್ಟೂರು. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಬದ್ಧನಾಗಿರುವೆ. ಬಳ್ಳಾರಿಯ ಅಭಿವೃದ್ಧಿಗೆ ಸಂಸದರ ನಿಧಿಯ ಶೇ. 75 ರಷ್ಟನ್ನು ವಿನಿಯೋಗಿಸುತ್ತಿರುವೆ. ನಾನು ಸದಾಕಾಲ ದುಡಿಯುವ ವರ್ಗ, ರೈತರು ಮತ್ತು ಜನಪರವಾಗಿರುವೆ ಎಂದರು.
ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ ಅವರು, ಜಿಲ್ಲೆಯ ಅಭಿವೃದ್ಧಿಗೆ ನಾನು ಸದಾ ನಿಮ್ಮೊಂದಿಗಿರುತ್ತೇನೆ. ಸಂಸದರಾದ ಇ. ತುಕಾರಾಂ, ಡಾ. ಸಯ್ಯದ್ ನಾಸೀರ್ ಹುಸೇನ್, ಶಾಸಕರಾದ ಬಿ. ನಾಗೇಂದ್ರ ಅವರು ಸೇರಿ ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಡಿಎಂಎಫ್, ಕೆಕೆಆರ್‌ಡಿಬಿ, ಕರ್ನಾಟಕ ಸರ್ಕಾರದ ವಿಶೇಷ ಅನುದಾನ ಸೇರಿ ಒಟ್ಟು 300 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುತ್ತದೆ ಎಂದರು.
ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ಲಿಡ್ಕರ್ ಅಧ್ಯಕ್ಷ ಮುಂಡ್ರಗಿ ನಾಗರಾಜ್ ಅವರು ಮಾತನಾಡಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಅವರು, ಸ್ವಾಗತ ಮತ್ತು ಪ್ರಾಸ್ತಾವಿಕ ಭಾಷಣ ಮಾಡಿ, ನಮ್ಮ ಸಂಸ್ಥೆಯು ದೇಶದಲ್ಲಿಯೇ ವಿಶೇಷವಾಗಿರುವ ರೈತಣ್ಣ ಊಟ, ರೈತಣ್ಣ ಹಾಸಿಗೆ, ಯುವಶಕ್ತಿಯ ಸ್ವಾವಲಂಭನೆಗಾಗಿ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಭವಿಷ್ಯದ ಉದ್ಯಮಿಗಳ ಮಾರ್ಗದರ್ಶನಕ್ಕಾಗಿ ಇಂಕ್ಯುಬೇಷನ್ ಸೆಂಟರ್ ಅನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಿದೆ.
ಬಳ್ಳಾರಿಯ ಅಭಿವೃದ್ಧಿಗಾಗಿ ವಿಮಾನ ನಿಲ್ದಾಣ, ಹೊಸಪೇಟೆವರೆಗೆ ಬರುವ ಬಾಂಬೆ ರೈಲನ್ನು ಬಳ್ಳಾರಿಗೆ ವಿಸ್ತರಿಸಬೇಕು, ಜೀನ್ಸ್ ಪಾರ್ಕ್ ಪ್ರಾರಂಭಕ್ಕೆ ವಿಶೇಷ ಪ್ರಯತ್ನ ಮಾಡಬೇಕು, ಜೀನ್ಸ್ ವಾಷಿಂಗ್ ಪ್ಲಾಂಟ್‌ಗಳ ಪುನಃಶ್ಚೇತನಕ್ಕೆ ಆದ್ಯತೆ ನೀಡಬೇಕು, ಕುಡತಿನಿ ಇಂಡಸ್ಟಿçಯಲ್ ಪ್ರದೇಶದಲ್ಲಿ ಕೈಗಾರಿಕೆಗಳ ಪ್ರಾರಂಭಕ್ಕೆ ಕೇಂದ್ರ ಪರಿಸರ ಮಾಲಿನ್ಯ ಮಂಡಲಿಯಿAದ ಪರವಾನಿಗೆ ಕೊಡಿಸಬೇಕು, ಹೊಸಪೇಟೆ – ಗುತ್ತಿ ರಾಷ್ಟಿçÃಯ ಹೆದ್ದಾರಿ ಮತ್ತು ಅಂಕೋಲ – ಶ್ರೀರಂಗಪ್ಟಣ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.
ನೆನೆಗುದಿಗೆ ಬಿದ್ದಿರುವ ಒಣ ಮೆಣಸಿನಕಾಯಿ ಮಾರುಕಟ್ಟೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಜನಪ್ರತಿನಿಧಿಗಳು ಪ್ರಯತ್ನಿಸಬೇಕಿದೆ. ನಮ್ಮ ಸಂಸ್ಥೆಯು ಜಿಲ್ಲೆಯ ಮೂಲಭೂತ ಸೌಲಭ್ಯಗಳು ಮತ್ತು ಅಭಿವೃದ್ಧಿಯ ಅವಿಭಾಜ್ಯವಾಗಿದೆ ಎಂದು ಹೇಳಿದರು.
ಬಿಡಿಸಿಸಿಐನ ಹಿರಿಯ ಉಪಾಧ್ಯಕ್ಷ ಮಂಜುನಾಥ್, ನಿಕಟಪೂರ್ವ ಅಧ್ಯಕ್ಷರಾದ ಬಿ. ಮಹಾರುದ್ರಗೌಡ, ಮಾಜಿ ಅಧ್ಯಕ್ಷರಾದ ಸಿ. ಶ್ರೀನಿವಾಸರಾವ್, ಖಜಾಂಚಿ ಪಿ. ಪಾಲಣ್ಣ ಅವರು ವೇದಿಕೆಯಲ್ಲಿದ್ದರು. . ಡಾ. ಶ್ರೀನಿವಾಸರೆಡ್ಡಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು ಅವರು ವಂದನಾರ್ಪಣೆ ಸಲ್ಲಿಸಿದರು.
ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಂಸದರು ಮತ್ತು ಶಾಸಕರ ಜೊತೆ ಮಾತನಾಡಿ, ತಮ್ಮ ಅಹವಾಲುಗಳನ್ನು ಸಲ್ಲಿಸಿ
WhatsApp Group Join Now
Telegram Group Join Now
Share This Article