ಪಿಎಂ ಕಿಸಾನ್ ಸಮ್ಮಾನ್ ನಿಧಿ: ಬೆಳಗಾವಿ ಜಿಲ್ಲೆಯ 5.03 ಲಕ್ಷ ರೈತರ ಖಾತೆಗೆ 100.65 ಕೋಟಿ ರೂ. ಜಮೆ: ಸಂಸದ ಈರಣ್ಣ ಕಡಾಡಿ

A B
By A B
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಬೆಳಗಾವಿ ಜಿಲ್ಲೆಯ 5.03 ಲಕ್ಷ ರೈತರ ಖಾತೆಗೆ 100.65 ಕೋಟಿ ರೂ. ಜಮೆ: ಸಂಸದ ಈರಣ್ಣ ಕಡಾಡಿ
WhatsApp Group Join Now
Telegram Group Join Now
ಮೂಡಲಗಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 3 ಸಾವಿರಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 100.65 ಕೋಟಿ ರೂ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ.
ಶುಕ್ರವಾರ ಮಾ-13 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 22ನೇ ಕಂತಿನ ಭಾಗವಾಗಿ ದೇಶದ 9.32 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ ರೂ. 18.640 ಸಾವಿರ ಕೋಟಿ ರೂಪಾಯಿ ಹಾಗೂ ರಾಜ್ಯದ 41.40 ಲಕ್ಷಕ್ಕೂ ಹೆಚ್ಚು ರೈತರ ಖಾತೆಗೆ 828.02 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಹಾಗೂ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಆರ್ಥಿಕ ನೆರವು ರೈತರಿಗೆ ಕೃಷಿ ಚಟುವಟಿಕೆಗಳನ್ನು ನಡೆಸಲು ಮತ್ತು ಆರ್ಥಿಕ ಸಂಕಷ್ಟದಿAದ ಹೊರಬರಲು ಹೆಚ್ಚಿನ ಬಲ ನೀಡಲಿದೆ ಎಂದು ಸಂಸದ ಈರಣ್ಣ ಕಡಾಡಿ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article