ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಸದೆ ಪ್ರಿಯಾಂಕಾ ಭೇಟಿ

Ravi Talawar
ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಸದೆ ಪ್ರಿಯಾಂಕಾ ಭೇಟಿ
WhatsApp Group Join Now
Telegram Group Join Now
ಸಂಕೇಶ್ವರ : ನಿರಂತರ ಸುರಿಯುತ್ತಿರುವ ಮಳೆಯಿಂದ ಹಿರಣ್ಯಕೇಶಿ ನದಿ ಪ್ರವಾಹಕ್ಕೆ ಒಳಗಾದ ಪೀಡಿತ ಪ್ರದೇಶಗಳಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಭೇಟಿ ನೀಡಿ ಪರಿಶೀಲಿಸಿದರು.
ಪಟ್ಟಣದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಾದ ನದಿ ಗಲ್ಲಿ, ಮಠ ಗಲ್ಲಿ, ವಿಕ್ಷಿಸಿದ ನಂತರ ಶಂಕರಲಿಂಗ ಕಾರ್ಯಲಯ, ಉರ್ದು ಶಾಲೆಯಲ್ಲಿ ಪ್ರಾರಂಭಿಸಿದ ಕಾಳಜಿ ಕೇಂದ್ರಕ್ಕೆ ಬೇಟಿ ಸಂತ್ರಸ್ತರಿಗೆ ಹೊದಿಕೆ ನೀಡಿದರು.
ನಂತರ ಮಾತನಾಡಿದ ಅವರು,ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನತೆ ಯಾರು ಕೂಡ ಭಯ ಪಡುವ ಅವಶ್ಯಕತೆ ಇಲ್ಲ. ಜಿಲ್ಲಾಡಳಿತ, ತಹಶೀಲ್ದಾರ , ಸ್ಥಳೀಯ ಮಟ್ಟದ ಅಧಿಕಾರಿಗಳು ಸೇರಿದಂತೆ ನಾವು ಕೂಡ ನಿರಂತರವಾಗಿ ನಿಮ್ಮ ಜೊತೆ ಇದ್ದೇವೆ ಎಂದರು.
ಜಿಲ್ಲಾಡಳಿತ, ಸ್ಥಳೀಯ ಮಟ್ಟದ ಅಧಿಕಾರಿಗಳು ಸಂತ್ರಸ್ತರಿಗಾಗಿ ಕಾಳಜಿ ಕೇಂದ್ರ ಆರಂಭಿಸಿದ್ದು, ಗುಣಮಟ್ಟದ ಆಹಾರವನ್ನು ಕಾಳಜಿ ಕೇಂದ್ರದಲ್ಲಿ ನೀಡಲಾಗುತ್ತಿದೆ ಎಂದರು. ಪಟ್ಟಣದ ಹಲವು ಪ್ರವಾಹ ಪೀಡಿತ ಪ್ರದೇಶಗಳಿಗೆ ನಾನು ಭೇಟಿ ನೀಡಿದ್ದು, ಸಂತ್ರಸ್ತರು ಹಲವು ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದು, ಪ್ರಾಮಾಣಿಕವಾಗಿ ಸಮಸ್ಯೆಗೆ ಸ್ಪಂದಿಸುವ ಕಾರ್ಯ ಮಾಡುತ್ತೇನೆ ಎಂದು ಹೇಳಿದರು.
ಇದೇ ವೇಳೆ ಅಧಿಕಾರಿಗಳಿಂದ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದರು. ಈ ಸಂಧರ್ಭದಲ್ಲಿ ತಹಶೀಲ್ದಾರ ಮಂಜುಳಾ ನಾಯಿಕ, ತಾಲೂಕಾ ವೈದ್ಯಾಧಿಕಾರಿ ಉದಯ ಕುಡಚಿ, ಉಪ ತಹಶೀಲ್ದಾರ ಸಿ.ಎ.ಪಾಟೀಲ, ಕಂದಾಯ ನಿರೀಕ್ಷಕ ಎ.ಎಮ್. ಕಮತನೂರ, ಪುರಸಭೆಯ ಮುಖ್ಯಾಧಿಕಾರಿ ಪ್ರಕಾಶ ಮಠದ, ಸಿಪಿಐ ಶಿವಶರಣ ಅವಜಿ, ಅಭಿಯಂತರ ರವೀಂದ್ರ ಗಡಾದ,ಗ್ರಾಮ ಲೆಕ್ಕಾಧಿಕಾರಿಗಳಾದ ಎನ್.ಆರ್ ಪಾಟೀಲ,  ಸೇರಿದಂತೆ ಮುಖಂಡರು ಹಾಜರಿದ್ದರು.
WhatsApp Group Join Now
Telegram Group Join Now
Share This Article