ಬೆಳಗಾವಿ : ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಬುಧವಾರ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವಡಗಾವಿಯ ಶ್ರೀ ಬನಶಂಕರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.
ನಂತರ, ವಡಗಾವಿ, ಖಾಸಬಾಗ್ ವ್ಯಾಪ್ತಿಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿ, ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪರಶುರಾಮ ಢಗೆ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ, ಕೇದಾರ್ ಜಿ, ಪವನ್ ರಾಥೋಡ್, ರಾಜೇಶ್ ಗಲಗಲಿ, ಬಸವರಾಜ ಕೆ, ಬಲರಾಮ ಸಂಗೊಳ್ಳಿ, ರಾಜು ಪಾಟೀಲ ಮುಂತಾದವರು ಉಪಸ್ಥಿತರಿದ್ದರು.