ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ: ವಿಚಾರಣಾ ಆಯೋಗ ರಚಿಸಿ ಆದೇಶ

Ravi Talawar
ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ: ವಿಚಾರಣಾ ಆಯೋಗ ರಚಿಸಿ ಆದೇಶ
WhatsApp Group Join Now
Telegram Group Join Now

ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬರುತ್ತಿರುವ ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಪ್ರತಿಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ.

ಸೋಮವಾರದಿಂದ ಆರಂಭವಾಗುವ ಅಧಿವೇಶನದಲ್ಲಿ ಈ ವಿಚಾರವಾಗಿ ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಮುಗಿಬೀಳಲು ಸಿದ್ಧರಾಗಿವೆ. ಈ ಮಧ್ಯೆ ರಾಜ್ಯ ಸರ್ಕಾರ ಮುಡಾ ಅಕ್ರಮ ಪ್ರಕರಣವನ್ನು ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ಆದೇಶ ಹೊರಡಿಸಿದೆ. ಆರೋಪಗಳ ಬಗ್ಗೆ ವಿಚಾರಣೆಯನ್ನು ನಡೆಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿರವರ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗವನ್ನು ರಚಿಸಿದೆ.

ನ್ಯಾಯಾಂಗ ಆಯೋಗ ರಚನೆ ಆದೇಶದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿದೆ. ಕುರಿತು ದಿನ ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದಿದೆ.

WhatsApp Group Join Now
Telegram Group Join Now
Share This Article