ಮುಡಾ ಹಗರಣದಿಂದ ಇಡಿಗೆ ಮುಖಭಂಗ ಸತ್ಯಕ್ಕೆ ಸಂದ ಜಯ: ಮುಂಡ್ರಿಗಿ ನಾಗರಾಜ್

Ravi Talawar
ಮುಡಾ ಹಗರಣದಿಂದ ಇಡಿಗೆ ಮುಖಭಂಗ ಸತ್ಯಕ್ಕೆ ಸಂದ ಜಯ: ಮುಂಡ್ರಿಗಿ ನಾಗರಾಜ್
WhatsApp Group Join Now
Telegram Group Join Now
ಬೆಂಗಳೂರು/ಬಳ್ಳಾರಿ ಜುಲೈ 22. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ಆದೇಶವನ್ನು ಸ್ವಾಗತಿಸುತ್ತೇವೆ. ಮುಖ್ಯಮಂತ್ರಿಗಳ  ಸುದೀರ್ಘ ರಾಜಕೀಯ ಜೀವನದಲ್ಲಿ ಅವರು ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವರು. ಈ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಆದೇಶ ಉಳಿಸಿಕೊಂಡು ಕಾಪಾಡಿದೆ.
ರಾಜಕೀಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು  ಎದುರಿಸಲಾಗದ ಭಾರತೀಯ ಜನತಾ ಪಕ್ಷ ಮತ್ತು ಅದರ ಸಂಗಾತಿಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇಡಿಯನ್ನು ದುರ್ಬಳಕೆ ಮಾಡಿಕೊಂಡು ಸಿದ್ದರಾಮಯ್ಯ ಹಾಗೂ ಅವರ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದುದು. ಇದರಿಂದ ಸಿಎಂ ಮತ್ತು ಅವರ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾವೆಂದೂ  ಮರೆಯಲು ಸಾಧ್ಯವಿಲ್ಲ.
ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾದ ಗೌರವಾನ್ವಿತ ಗವಾಯಿ ಅವರ ‘’ರಾಜಕೀಯ ಸಮರಕ್ಕೆ ಮತದಾರರನ್ನು ಬಳಸಕೊಳ್ಳಬೇಕೇ ಹೊರತು, ಇದಕ್ಕಾಗಿ ಜಾರಿ ನಿರ್ದೇಶನಾಲಯದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಬಾರದು‘’ ಎಂಬ ಅವರ ಮಾತುಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜ್ಞಾವಂತ ಭಾರತೀಯನ ಅಭಿಪ್ರಾಯವಾಗಿದೆ.
ಕಳೆದ 10-11 ವರ್ಷಗಳಿಂದ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಐಟಿ, ಸಿಬಿಐ ಮತ್ತು ಇಡಿಯ ದುರ್ಬಳಕೆ ಮೂಲಕ ಸಾಧಿಸುತ್ತಿರುವ ರಾಜಕೀಯ ದ್ವೇಷಕ್ಕೆ ಬಲಿಯಾದವರೆಲ್ಲರಲ್ಲಿಯೂ ಈ ತೀರ್ಪು ಸಮಾಧಾನ ಉಂಟುಮಾಡಿದೆ ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ.
ಸುಪ್ರೀಂಕೋರ್ಟ್‌ನ ಈ ಕಣ್ಣುತೆರೆಸುವ ಆದೇಶದ ನಂತರವಾದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಎಚ್ಚೆತ್ತುಕೊಂಡು ಐಟಿ, ಸಿಬಿಐ ಮತ್ತು ಇ.ಡಿ.ಯಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಿ ಅವುಗಳಿಗೆ ಇರಬೇಕಾಗಿರುವ ಸ್ವಾಯತ್ತತೆಯನ್ನು ಕೊಟ್ಟು ತಮ್ಮ ಪಾಪ ತೊಳೆದುಕೊಳ್ಳಬೇಕು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಕಪೋಲಕಲ್ಪಿತ ಆರೋಪಗಳನ್ನು ಮಾಡುತ್ತಾ ಬಂದಿರುವ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ನಾಯಕರಲ್ಲಿ ಕಿಂಚಿತ್ತಾದರೂ ಮಾನ-ಮರ್ಯಾದೆ ಎನ್ನುವುದು ಉಳಿದುಕೊಂಡಿದ್ದರೆ ಅವರೆಲ್ಲರೂ ತಕ್ಷಣ ತಮ್ಮ ತಪ್ಪಿಗಾಗಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಅಭಿಪ್ರಾಯ ಪಟ್ಟರು.
WhatsApp Group Join Now
Telegram Group Join Now
Share This Article