ಮೈಸೂರು: ಮುಡಾ ಹಗರಣ ಪ್ರಕಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಅಸ್ತು ಎಂದ ಬೆನ್ನಲ್ಲೇ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಪುತ್ರ ಡಾ. ಯತೀಂದ್ರ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿ ದೂರುದಾರರಲ್ಲಿ ಒಬ್ಬರಾದ ಪ್ರದೀಪ್ ಕುಮಾರ್ ಅವರು ಬುಧವಾರ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಜೆಡಿಎಸ್ ಮುಖಂಡರ ಜೊತೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿದ ಪ್ರದೀಪ್ ಕುಮಾರ್ ಅವರು, ಸಿದ್ದರಾಮಯ್ಯ, ಯತೀಂದ್ರ ಸಿದ್ದರಾಮಯ್ಯ, ಪಾರ್ವತಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಮೇಲೆ ಎಫ್‌ಐಆರ್ ಹಾಕಬೇಕು ಎಂದು ದೂರು ನೀಡಿದರು.
ಇದೇ ವೇಳೆ ಈ ಹಿಂದಿನ ದೂರುಗಳ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದೀರಿ ಎಂಬ ಬಗ್ಗೆ ಹಿಂಬರಹ ನೀಡುವಂತೆ ಪ್ರದೀಪ್ ಕುಮಾರ್ ಒತ್ತಾಯಿಸಿದರು. ಆದರೆ, ಈಗ ಕೊಡಲು ಸಾಧ್ಯವಿಲ್ಲ. ಹಿರಿಯ ಅಧಿಕಾರಿಗಳ ಸಲಹೆ ಪಡೆದು ಹಿಂಬರಹ ಕೊಡುತ್ತೇನೆ ಎಂದು ಲೋಕಾಯುಕ್ತ ಎಸ್‌ಪಿ ತಿಳಿಸಿದ್ದು, ಇದಕ್ಕೆ ಪ್ರದೀಪ್ ಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದರು.