ಬೆಂಗಳೂರು, ಅ.01: ಮುಡಾ ಹಗರಣ ಸಂಬಂಧ ರಾಜ್ಯ ರಾಜಕೀಯದಲ್ಲಿ ಸಂಚಲನಕಾರಿ ಬೆಳವಣಿಗೆಯಾಗಿದೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು 14 ಸೈಟ್ಗಳನ್ನು ವಾಪಸ್ ಮಾಡೋದಾಗಿ ಮುಡಾಗೆ ಪತ್ರ ಬರೆದಿರೋದು ಬಿಜೆಪಿಗೆ ಮತ್ತೊಂದು ಬ್ರಹ್ಮಾಸ್ತ್ರವೇ ಸಿಕ್ಕಂತಾಗಿದೆ.
ತಪ್ಪೇ ಮಾಡುತ್ತಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪು ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟಕ್ಕೆ ಸಿಕ್ಕ ಮತ್ತೊಂದು ಜಯ. ಆದರೆ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ? ಎಂದು ನಿನ್ನೆ ಆರ್.ಅಶೋಕ್ (R Ashok) ಪ್ರಶ್ನಿಸಿದ್ದರು. ಇಂದು ಮುಡಾ ಸೈಟ್ ವಾಪಸ್ ಕೊಟ್ಟಿರುವುದು ರಾಜಕೀಯ ಡ್ರಾಮಾ. ಸಿದ್ದರಾಮಯ್ಯನವರು ಇನ್ನು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.