ಮುಂಬೈ ಸರಣಿ ರೈಲು ಸ್ಫೋಟ ಪ್ರಕರಣ:12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂ​ ತಡೆ

Ravi Talawar
ಮುಂಬೈ ಸರಣಿ ರೈಲು ಸ್ಫೋಟ ಪ್ರಕರಣ:12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂ​ ತಡೆ
WhatsApp Group Join Now
Telegram Group Join Now

ನವದೆಹಲಿ, ಜುಲೈ 24:

ನವದೆಹಲಿ, ಜುಲೈ 24: ಮುಂಬೈನಲ್ಲಿ 2006ರಲ್ಲಿ ನಡೆದ ಸರಣಿ ರೈಲು ಸ್ಫೋಟ(Train Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್​ ನೀಡಿದ್ದ 12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂಕೋರ್ಟ್​ ತಡೆ ನೀಡಿದೆ. ಆರೋಪಿಗಳು ಮತ್ತೆ ಜೈಲಿಗೆ ಮರುಳುತ್ತಾರಾ ಎಂದು ಕಾದು ನೋಡಬೇಕಿದೆ. ಸಾಕ್ಷ್ಯಾಧಾರಗಳ ಕೊರತೆ ಇರುವ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸುತ್ತಿರುವುದಾಗಿ ಬಾಂಬೆ ಹೈಕೋರ್ಟ್​ ಹೇಳಿತ್ತು.

189 ಜನರ ಸಾವಿಗೆ ಕಾರಣವಾದ 2006 ರ ಮುಂಬೈ ರೈಲು ಸ್ಫೋಟದ ಎಲ್ಲಾ 12 ಅಪರಾಧಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಆರೋಪಿಗಳು ಈಗಾಗಲೇ 18 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದಾರೆ. ವಿಶೇಷ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಖುಲಾಸೆಗೊಳಿಸಿದ್ದರೂ, ರಾಜ್ಯ ಸರ್ಕಾರವು ಅದರ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿರಲಿಲ್ಲ. ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾಗ ಸಾವನ್ನಪ್ಪಿದ್ದ.

ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್​ ನೀಡಿದ್ದ 12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂಕೋರ್ಟ್​ ತಡೆ ನೀಡಿದೆ. ಆರೋಪಿಗಳು ಮತ್ತೆ ಜೈಲಿಗೆ ಮರುಳುತ್ತಾರಾ ಎಂದು ಕಾದು ನೋಡಬೇಕಿದೆ. ಸಾಕ್ಷ್ಯಾಧಾರಗಳ ಕೊರತೆ ಇರುವ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸುತ್ತಿರುವುದಾಗಿ ಬಾಂಬೆ ಹೈಕೋರ್ಟ್​ ಹೇಳಿತ್ತು.

WhatsApp Group Join Now
Telegram Group Join Now
Share This Article