ಬಳ್ಳಾರಿ ಜುಲೈ 15. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕೋಶ ಬಳ್ಳಾರಿ ಇವರ ಸಹಯೋಗದಲ್ಲಿ ಬಳ್ಳಾರಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ನಡೆದ “ಗೃಹ ಆರೋಗ್ಯ ಯೋಜನೆಯ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮ, ಜಿಲ್ಲಾಧ್ಯಂತ ಗೃಹ ಆರೋಗ್ಯ ಯೋಜನೆಯ ವಿಸ್ತರಣೆಯ ಹಾಗೂ ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ ಭಾಗವಹಿಸಿದ್ದರು.
ಈ ಸಂಧರ್ಭದಲ್ಲಿ ಮೇಯರ್ ಮುಲ್ಲಂಗಿ ನಂದೀಶ್, ಜಿಲ್ಲಾ ಪಂಚಾಯತ್ ಸಿಇಒ ಮಹಮದ್ ಹ್ಯಾರಿಸ್ ಸುಮೈರ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಲ್ಲಾ ಆರ್ ರಮೇಶ್ ಬಾಬು, ಡಾ ಹನುಮಂತಪ್ಪ, ಡಾ. ಮೇರಿ ಮುಂತಾದವರು ಉಪಸ್ಥಿತರಿದ್ದರು.