ಮುಸ್ಲಿಂ ಹುಡುಗ- ಹಿಂದೂ ಹುಡುಗಿ ವಿವಾಹ ಅಕ್ರಮ!

Ravi Talawar
ಮುಸ್ಲಿಂ ಹುಡುಗ- ಹಿಂದೂ ಹುಡುಗಿ ವಿವಾಹ ಅಕ್ರಮ!
WhatsApp Group Join Now
Telegram Group Join Now

ಭೋಪಾಲ್: ಮುಸ್ಲಿಂ ಹುಡುಗ ಮತ್ತು ಹಿಂದೂ ಹುಡುಗಿಯ ನಡುವೆ ಮತಾಂತರವಾಗದೆ ವಿವಾಹವಾಗುವುದು ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಕಾನೂನುಬಾಹಿರ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ. ಇದರೊಂದಿಗೆ ವಿಶೇಷ ವಿವಾಹ ಕಾಯ್ದೆ-954ರ ಅಡಿಯಲ್ಲಿ ಅಂತರ್ ಧರ್ಮೀಯ ವಿವಾಹ ನೋಂದಣಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾಗಿದ್ದರೂ, ಮುಸ್ಲಿಂ ಪುರುಷ ಮತ್ತು ಹಿಂದೂ ಮಹಿಳೆಯ ನಡುವಿನ ವಿವಾಹವನ್ನು ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿಯಲ್ಲಿ ಅಕ್ರಮ ಎಂದು ಪರಿಗಣಿಸಲಾಗುತ್ತದೆ ಎಂದು ನ್ಯಾಯಮೂರ್ತಿ ಜಿಎಸ್ ಅಹ್ಲುವಾಲಿಯಾ ಅವರ ಏಕ ಪೀಠ ಹೇಳಿದೆ. ವಾಸ್ತವವಾಗಿ, ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ, ವಿಗ್ರಹಾರಾಧಕ ಅಥವಾ ಅಗ್ನಿ ಆರಾಧಕ ಹುಡುಗಿಯೊಂದಿಗೆ ಮುಸ್ಲಿಂ ಹುಡುಗನ ವಿವಾಹವು ಮಾನ್ಯ ವಿವಾಹವಲ್ಲ ಎಂದರು.

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ಸಾರಿಕಾ ಸೇನ್ ಮತ್ತು ಸಫೀಕ್ ಖಾನ್ ದಂಪತಿಗಳು ಅರ್ಜಿ ಸಲ್ಲಿಸಿದ್ದು, ಇಬ್ಬರೂ ಮದುವೆಯಾಗಿದ್ದೇವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಈಗ ಅವರು ತಮ್ಮ ಮದುವೆಯನ್ನು ನೋಂದಾಯಿಸಲು ಬಯಸುತ್ತಾರೆ. ಇವರ ಮದುವೆಗೆ ಮಹಿಳೆಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದಾರೆ. ಅವರ ಸಮುದಾಯವೂ ಅವರನ್ನು ಬಹಿಷ್ಕರಿಸುವ ಮಾತನ್ನಾಡಿದೆ. ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿರುವುದರಿಂದ ತಹಶೀಲ್ದಾರ ಕಚೇರಿಗೆ ತೆರಳಿ ವಿವಾಹ ನೋಂದಣಿ ಮಾಡಿಕೊಳ್ಳುವಂತೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ಕೋರಿದ್ದರು.

ಅರ್ಜಿದಾರರ ಪರವಾಗಿ, ಮಹಿಳೆ ಅಥವಾ ಪುರುಷ ವಿವಾಹಕ್ಕಾಗಿ ಬೇರೆ ಯಾವುದೇ ಧರ್ಮವನ್ನು ಸ್ವೀಕರಿಸಲು ಬಯಸುವುದಿಲ್ಲ ಎಂದು ಹೈಕೋರ್ಟ್‌ಗೆ ತಿಳಿಸಲಾಯಿತು. ಮಹಿಳೆ ಹಿಂದೂ ಧರ್ಮವನ್ನು ಅನುಸರಿಸುವುದನ್ನು ಮುಂದುವರಿಸುತ್ತಾಳೆ. ಆದರೆ ಪುರುಷನು ಮದುವೆಯ ನಂತರವೂ ಇಸ್ಲಾಂ ಧರ್ಮವನ್ನು ಅನುಸರಿಸುತ್ತಾನೆ.

WhatsApp Group Join Now
Telegram Group Join Now
Share This Article