ಮೈಸೂರಿನ ರೈಲ್ವೆ ಯೋಜನೆ ತ್ವರಿತ ಪೂರ್ಣಗೊಳಿಸಲು ಕೇಂದ್ರ ಅಸ್ತು

Ravi Talawar
ಮೈಸೂರಿನ ರೈಲ್ವೆ ಯೋಜನೆ ತ್ವರಿತ ಪೂರ್ಣಗೊಳಿಸಲು ಕೇಂದ್ರ ಅಸ್ತು
WhatsApp Group Join Now
Telegram Group Join Now

ಮೈಸೂರು: ಮೈಸೂರಿನಲ್ಲಿರುವ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಕ್ಕೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿದ್ದಾರೆ ಎಂದು ಮೈಸೂರು – ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸಂಸತ್‌ ಅಧಿವೇಶನದ ನೇಪಥ್ಯದಲ್ಲಿ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಅವರನ್ನು ಭೇಟಿ ಮಾಡಿದ ನಂತರ ಸಂಸದ ಯದುವೀರ್‌ ಒಡೆಯರ್‌ ಮಾಹಿತಿ ನೀಡಿದ್ದಾರೆ.

ವಿಮಾನ ನಿಲ್ದಾಣ ವಿಸ್ತರಣೆಗೆ ನೆರವು: ಮೈಸೂರಿನಲ್ಲಿ ವಿಮಾನ ನಿಲ್ದಾಣ ವಿಸ್ತರಣೆಗೆ ಅನುಕೂಲವಾಗುವಂತೆ ರೈಲ್ವೆ ಹಳಿಗಳ ಸ್ಥಳಾಂತರ ವಿಷಯದ ಕುರಿತು ಸಚಿವರಿಗೆ ಮನವಿ ಮಾಡಿದಾಗ ಕೂಡಲೇ ಅದಕ್ಕೆ ಸ್ಪಂದಿಸಿ, ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು ಎಂದು ಸಂಸದರು ತಿಳಿಸಿದ್ದಾರೆ.

ವಿಮಾನ ನಿಲ್ದಾಣ ವಿಸ್ತರಣೆಗೆ ಬೇಕಿರುವ 46 ಎಕರೆ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಹಸ್ತಾಂತರ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಇದೇ ಸಂದರ್ಭದಲ್ಲಿ ಮನವಿ ಮಾಡುತ್ತೇನೆ. ಇದರಿಂದ ವಿಮಾನ ನಿಲ್ದಾಣ ವಿಸ್ತರಣೆ ಕಾರ್ಯ ತ್ವರಿತಗತಿಯಲ್ಲಿ ನಡೆಯಲಿದೆ ಎಂದು ಯದುವೀರ್‌ ವಿವರಿಸಿದ್ದಾರೆ.

WhatsApp Group Join Now
Telegram Group Join Now
Share This Article