ನಾಡದೊರೆ ರಾಜವೀರ ಮದಕರಿ ನಾಯಕ ಯುವ ಬ್ರಿಗೇಡ್ ಜಿಲ್ಲಾಧ್ಯಕ್ಷರಾಗಿ ಬಸವ ಬಳ್ಳಾರಿ ನೇಮಕ

Hasiru Kranti
ನಾಡದೊರೆ ರಾಜವೀರ ಮದಕರಿ ನಾಯಕ ಯುವ ಬ್ರಿಗೇಡ್ ಜಿಲ್ಲಾಧ್ಯಕ್ಷರಾಗಿ ಬಸವ ಬಳ್ಳಾರಿ ನೇಮಕ
WhatsApp Group Join Now
Telegram Group Join Now
ಬಳ್ಳಾರಿ, ಜ.06: ನಾಡದೊರೆ ರಾಜವೀರ ಮದಕರಿ ನಾಯಕ ಯುವ ಬ್ರಿಗೇಡ್ ವತಿಯಿಂದ ಸಂಘಟನೆಯ ರಾಜ್ಯಾಧ್ಯಕ್ಷರಾದ ನವೀನ್ ಅವರ ನೇತೃತ್ವದಲ್ಲಿ ಬಳ್ಳಾರಿ ಜಿಲ್ಲಾ ಯುವ ಬ್ರಿಗೇಡ್ ಅಧ್ಯಕ್ಷರಾಗಿ ಬಸವ ಬಳ್ಳಾರಿ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ.
ನಗರದಲ್ಲಿ ಜರುಗಿದ ವಿಶೇಷ ಕಾರ್ಯಕ್ರಮದಲ್ಲಿ ಈ ನೇಮಕಾತಿಗೆ ಸಂಬಂಧಿಸಿದ ಆದೇಶ ಪತ್ರವನ್ನು ಮಾಜಿ ಸಚಿವರಾದ ಬಿ.ಶ್ರೀರಾಮುಲು  ಶಾಸಕರಾದ ಗಾಲಿ ಜನಾರ್ದನ ರೆಡ್ಡಿ, ಹಾಗೂ ಮಾಜಿ ಶಾಸಕ ಸುರೇಶ್ ಬಾಬು ಅವರ ಸಾನ್ನಿಧ್ಯದಲ್ಲಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರು, ನಾಯಕರ ನಾಡದೊರೆ ರಾಜವೀರ ಮದಕರಿ ನಾಯಕ ಅವರ ಆದರ್ಶಗಳು, ಶೌರ್ಯ, ಸಾಮಾಜಿಕ ನ್ಯಾಯ ಹಾಗೂ ಯುವ ಶಕ್ತಿಯ ಸಂಘಟನೆಯ ಅಗತ್ಯವನ್ನು ಸ್ಮರಿಸಿ, ಯುವಕರನ್ನು ಸಂಘಟಿಸಿ ಸಮಾಜಮುಖಿ ಚಟುವಟಿಕೆಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ಕೈಜೋಡಿಸುವಲ್ಲಿ ಯುವ ಬ್ರಿಗೇಡ್ ಪ್ರಮುಖ ಪಾತ್ರ ವಹಿಸಬೇಕು ಎಂದು ಕರೆ ನೀಡಿದರು.
ನವೀನವಾಗಿ ನೇಮಕಗೊಂಡ ಜಿಲ್ಲಾ ಅಧ್ಯಕ್ಷ ಬಸವ ಬಳ್ಳಾರಿ ಮಾತನಾಡಿ, ಸಂಘಟನೆಯ ನಂಬಿಕೆಗೆ ಕೃತಜ್ಞತೆ ಸಲ್ಲಿಸಿ, ಬಳ್ಳಾರಿ ಜಿಲ್ಲೆಯಲ್ಲಿ ಯುವಕರನ್ನು ಒಗ್ಗೂಡಿಸಿ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಂಘಟನಾ ಚಟುವಟಿಕೆಗಳನ್ನು ಇನ್ನಷ್ಟು ಬಲಪಡಿಸುವುದಾಗಿ ಭರವಸೆ ನೀಡಿದರು.
WhatsApp Group Join Now
Telegram Group Join Now
Share This Article