ಒಳಮೀಸಲಾತಿ ಕುರಿತ ನಾಗಮೋಹನ್ ದಾಸ್ ಒಂದು ವಾರದಲ್ಲಿ ಮಧ್ಯಂತರ ವರದಿ: ಹೆಚ್‌ಸಿ ಮಹದೇವಪ್ಪ

Ravi Talawar
ಒಳಮೀಸಲಾತಿ ಕುರಿತ ನಾಗಮೋಹನ್ ದಾಸ್ ಒಂದು ವಾರದಲ್ಲಿ ಮಧ್ಯಂತರ ವರದಿ: ಹೆಚ್‌ಸಿ ಮಹದೇವಪ್ಪ
WhatsApp Group Join Now
Telegram Group Join Now

ಬೆಂಗಳೂರು: ಒಳಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಒಂದು ವಾರದಲ್ಲಿ ಮಧ್ಯಂತರ ವರದಿ ನೀಡಲಿದ್ದಾರೆ. ಬಳಿಕ ಸಿಎಂ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಸಭೆ ನಡೆಸಲಾಯಿತು. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಸಚಿವರಾದ ಜಿ.ಪರಮೇಶ್ವರ್, ಹೆಚ್.ಸಿ. ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ಜಂಟಿ ಮಾಧ್ಯಮಗೋಷ್ಟಿ ನಡೆಸಿದ ಸಚಿವರಾದ ಹೆಚ್.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಕೆ.ಹೆಚ್‌. ಮುನಿಯಪ್ಪ, ಆರ್.ಬಿ.ತಿಮ್ಮಾಪುರ ಹಾಗೂ ಶಿವರಾಜ್ ತಂಗಡಗಿ, ಒಳಮೀಸಲಾತಿ ಸಂಬಂಧ ಆಗಿರುವ ಪ್ರಗತಿ ಬಗ್ಗೆ ನಾಗಮೋಹನ್ ದಾಸ್ ಮಾಹಿತಿ ನೀಡಿದ್ದಾರೆ. ಒಳಮೀಸಲಾತಿ ವರದಿ ಬೇಗ ನೀಡುವಂತೆ ಸಿಎಂ ಆಯೋಗಕ್ಕೆ ಸೂಚನೆ ನೀಡಿದ್ದಾರೆ. ಒಳಮೀಸಲಾತಿ ಜಾರಿಗೆ ಸರ್ಕಾರಕ್ಕೆ ಬದ್ಧತೆ ಇದೆ ಎಂದು ತಿಳಿಸಿದರು.

ಸಿಎಂ ಜೊತೆ ಚರ್ಚಿಸಿ ತೀರ್ಮಾನ: ದತ್ತಾಂಶ ಆಧಾರದಲ್ಲಿ ಒಳಮೀಸಲಾತಿ ವರದಿ ನೀಡಲು ಸೂಚಿಸಲಾಗಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವಾರದೊಳಗೆ ಮಧ್ಯಂತರ ವರದಿ ನೀಡಲಿದ್ದಾರೆ. ಮಧ್ಯಂತರ ವರದಿ ಸಲ್ಲಿಕೆಯಾದ ಬಳಿಕ ಒಳ ಮೀಸಲಾತಿಯನ್ನು ಸುಪ್ರೀಂಕೋರ್ಟ್ ತೀರ್ಪಿನ ಅಂಶಗಳ ಆಧಾರದಲ್ಲಿ ಜಾರಿ ಮಾಡಲು ಕ್ರಮ ವಹಿಸಲಾಗುವುದು. ಒಳಮೀಸಲಾತಿ ಜಾರಿ ಮಾಡಬೇಕು ಎಂಬುದು ನಮ್ಮ ಬದ್ಧತೆ. ಒಳಮೀಸಲಾತಿಯನ್ನು ನ್ಯಾಯಾಲಯಗಳಲ್ಲೂ ಎತ್ತಿ ಹಿಡಿಯುವಂತಿರಬೇಕು. ಮಧ್ಯಂತರ ವರದಿ ಮೇಲೆ ಚರ್ಚೆ ಮಾಡಿದ ಬಳಿಕ ಸಿಎಂ ಜೊತೆ ಚರ್ಚಿಸಿ ಜಾರಿ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

WhatsApp Group Join Now
Telegram Group Join Now
Share This Article