ನಾಯಬ್ ಸಿಂಗ್ ಸೈನಿ ಅ.12ರಂದು ಹರ್ಯಾಣ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸಾಧ್ಯತೆ

Ravi Talawar
ನಾಯಬ್ ಸಿಂಗ್ ಸೈನಿ  ಅ.12ರಂದು ಹರ್ಯಾಣ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸಾಧ್ಯತೆ
WhatsApp Group Join Now
Telegram Group Join Now

ಹರ್ಯಾಣ:  ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಬಿಜೆಪಿ ಗೆಲುವಿನ ನಂತರವೇ ಸಿಎಂ ಯಾರಾಗುತ್ತಾರೆ ಎಂಬುದು ಬಹುತೇಕ ನಿರ್ಧಾರವಾಗಿದೆ. ನಾಯಬ್ ಸಿಂಗ್ ಹಯಾರ್ಣದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಮೋಹನ್​ ಲಾಲ್ ಬಧೋಲಿ ಮತ್ತು ನಾಯಬ್ ಸೈನಿ ಇಂದು ದೆಹಲಿಗೆ ತೆರಳುತ್ತಿದ್ದು, ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ, ಅಕ್ಟೋಬರ್ 12 ವಿಜಯದಶಮಿಯಂದು ನಾಯಬ್ ಸೈನಿ ಹಯಾರ್ಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಇದೀಗ ಎಲ್ಲರ ಕಣ್ಣು ಮುಂದಿನ ಸರ್ಕಾರ ರಚನೆಯತ್ತ ನೆಟ್ಟಿದೆ. ಮುಖ್ಯಮಂತ್ರಿ ನೈಬ್ ಸೈನಿ ಜೊತೆಗೆ ಒಬ್ಬ ಅಥವಾ ಇಬ್ಬರು ಉಪಮುಖ್ಯಮಂತ್ರಿಗಳೂ ಇರಬಹುದು ಎಂದು ಹೇಳಲಾಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮೊದಲು, ಬಿಜೆಪಿಯ ಕೇಂದ್ರ ನಾಯಕತ್ವವು ಶಾಸಕರೊಂದಿಗೆ ಸಭೆ ನಡೆಸಲು ಹರ್ಯಾಣಕ್ಕೆ ವೀಕ್ಷಕರನ್ನು ಕಳುಹಿಸುತ್ತದೆ, ಇದರಿಂದಾಗಿ ಪಕ್ಷವು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹುದ್ದೆಗೆ ಸರಿಯಾದ ಅಭ್ಯರ್ಥಿಯನ್ನು ಅಧಿಕೃತವಾಗಿ ಆಯ್ಕೆ ಮಾಡುತ್ತದೆ. ಅದರೊಂದಿಗೆ ಸಂಪುಟ ಸಚಿವರ ಪಟ್ಟಿಯನ್ನು ತಯಾರಿಸಲಾಗುವುದು.

WhatsApp Group Join Now
Telegram Group Join Now
Share This Article