ಬೆಂಗಳೂರು, ನವೆಂಬರ್ 10: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಸಾಮೂಹಿಕ ನಮಾಜ್ ಮಾಡಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಇದನ್ನು ಒಪ್ಪುತ್ತಾರೆಯೇ ಎಂದು ಕರ್ನಾಟಕ ಬಿಜೆಪಿ ವಕ್ತಾರ ವಿಜಯ್ ಪ್ರಸಾದ್ ಪ್ರಶ್ನಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಂಪೇಗೌಡ ನಿಲ್ದಾಣದಲ್ಲಿ ನಮಾಜ್ ಘಟನೆ: ಸಿಎಂ, ಖರ್ಗೆಗೆ ಬಿಜೆಪಿ ಪ್ರಶ್ನೆ

‘ಈ ವ್ಯಕ್ತಿಗಳು ಅತಿ ಹೆಚ್ಚಿನ ಭದ್ರತೆ ಇರುವ ವಿಮಾನ ನಿಲ್ದಾಣ ವಲಯದಲ್ಲಿ ನಮಾಜ್ ಮಾಡಲು ಪೂರ್ವಾನುಮತಿ ಪಡೆದಿದ್ದಾರೆಯೇ? ಸಂಬಂಧಿತ ಅಧಿಕಾರಿಗಳಿಂದ ಸೂಕ್ತ ಅನುಮತಿ ಪಡೆದ ನಂತರ ಆರ್ಎಸ್ಎಸ್ ಪಥ ಸಂಚಲನೆ ನಡೆಸಿದಾಗಲೂ ಆಕ್ಷೇಪಿಸುವ ಸರ್ಕಾರ, ನಿರ್ಬಂಧಿತ ಸಾರ್ವಜನಿಕ ಪ್ರದೇಶದಲ್ಲಿ ನಮಾಜ್ ಮಾಡಿದಂಥ ಚಟುವಟಿಕೆಗಳನ್ನು ಏಕೆ ನಿರ್ಲಕ್ಷಿಸುತ್ತದೆ’ ಎಂದು ಅವರು ಪ್ರಶ್ನಿಸಿದ್ದಾರೆ.

