ನಂದಿನಿ ದೋಸೆ, ಇಡ್ಲಿ ಹಿಟ್ಟಿಗೆ ಭಾರಿ ಬೇಡಿಕೆ

Ravi Talawar
ನಂದಿನಿ ದೋಸೆ, ಇಡ್ಲಿ ಹಿಟ್ಟಿಗೆ ಭಾರಿ ಬೇಡಿಕೆ
WhatsApp Group Join Now
Telegram Group Join Now

ಬೆಂಗಳೂರು, ಜನವರಿ 3: ಕರ್ನಾಟಕ ಹಾಗೂ ಹೊರರಾಜ್ಯಗಳಲ್ಲಿ ಜನರ ಮನಗೆದ್ದಿರುವ ನಂದಿನಿ ಬ್ರ್ಯಾಂಡ್ ಇದೀಗ ಮತ್ತೊಂದು ಮೈಲಿಗಲ್ಲು ಬರೆಯಲು ಸಜ್ಜಾಗಿದೆ. ಇತ್ತೀಚೆಗಷ್ಟೇ ಕೆಎಂಎಫ್ ಪರಿಚಯಿಸಿದ್ದ ಇಡ್ಲಿ ಹಾಗೂ ದೋಸೆ ಹಿಟ್ಟಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದ್ದು, ಕೇವಲ ಮೂರು ದಿನದಲ್ಲಿ ಬರೋಬ್ಬರಿ 2250 ಮೆಟ್ರಿಕ್ ಟನ್ ಹಿಟ್ಟು ಮಾರಾಟವಾಗಿದೆ. ಸದ್ಯ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಆರಂಭಿಸಿರುವ ದೋಸೆ ಹಿಟ್ಟಿನ ಮಾರಾಟಕ್ಕೆ ಸಖತ್ ಬೇಡಿಕೆ ಸೃಷ್ಟಿಯಾದ್ದು, ಶೀಘ್ರದಲ್ಲೇ ಇತರೆ ಜಿಲ್ಲೆಗಳಿಗೂ ದೋಸೆ ಹಿಟ್ಟಿನ ವ್ಯಾಪಾರ ವಿಸ್ತರಿಸಲು ಕೆಎಂಎಫ್ ಸಜ್ಜಾಗುತ್ತಿದೆ.

WhatsApp Group Join Now
Telegram Group Join Now
Share This Article