ಬಳ್ಳಾರಿ, ಜು.31: ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ 50 ಕೋಟಿ ರೂ.ಗಳನ್ನು ಹಂಚಿಕೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಹಾಗೂ ಪಕ್ಷದ ವರಿಷ್ಠರಿಗೆ ಶಾಸಕ ನಾರಾ ಭರತ್ ರೆಡ್ಡಿ ಧನ್ಯವಾದ ತಿಳಿಸಿದ್ದಾರೆ.
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿ ಹಾಗೂ ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚೆ ಮಾಡಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬಳ್ಳಾರಿ ನಗರ ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿರುವುದಾಗಿ ಗುರುವಾರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಲಾದ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ.ಗಳ ಅನುದಾನ ಹಂಚಿಕೆ ಆಗಿರುವುದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕ್ಷೇತ್ರದ ಜನರ ಪರವಾಗಿ ಧನ್ಯವಾದ ತಿಳಿಸುವೆ ಎಂದಿದ್ದಾರೆ.