ಬಳ್ಳಾರಿಯಲ್ಲಿ ಪೌರ ಕಾರ್ಮಿಕರ ದಿನಾಚರಣೆ
ಬಳ್ಳಾರಿ,ಸೆ.24 ದೇಶ ಮತ್ತು ರಾಜ್ಯ ಸುಂದರವಾಗಿ, ಸ್ವಚ್ಛವಾಗಿ ಇರಬೇಕಾದರೆ ಪೌರಕಾರ್ಮಿಕರ ಸೇವೆ ಮಹತ್ತರವಾಗಿದೆ. ಪೌರ ಕಾರ್ಮಿಕರು ನೈಜ ಕಾಯಕಯೋಗಿಗಳು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.
ಬಳ್ಳಾರಿ,ಸೆ.24 ದೇಶ ಮತ್ತು ರಾಜ್ಯ ಸುಂದರವಾಗಿ, ಸ್ವಚ್ಛವಾಗಿ ಇರಬೇಕಾದರೆ ಪೌರಕಾರ್ಮಿಕರ ಸೇವೆ ಮಹತ್ತರವಾಗಿದೆ. ಪೌರ ಕಾರ್ಮಿಕರು ನೈಜ ಕಾಯಕಯೋಗಿಗಳು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.
ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ನಗರದ ವಾಲ್ಮೀಕಿ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಗರದ ಸ್ವಚ್ಚತೆ ಕಾಪಾಡುವ ಜವಾಬ್ದಾರಿ ಪೌರಕಾರ್ಮಿಕರ ಮೇಲಿದೆ. ಗಾಳಿ, ಮಳೆ, ಬಿಸಿಲು, ಚಳಿ ಎನ್ನದೇ ದಿನನಿತ್ಯ ನಸುಕಿನ ಜಾವದಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಪೌರ ಕಾರ್ಮಿಕರು ತಮ್ಮ ಕಾಯಕದ ಬಗ್ಗೆ ನಿರಾಸಕ್ತಿ ತೋರದೆ, ಮನಪೂರ್ವಕವಾಗಿ, ಶ್ರದ್ಧೆಯಿಂದ ಕಾಯಕ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ನಗರದಲ್ಲಿ ಈಗಾಗಲೇ 130 ಪೌರಕಾರ್ಮಿಕರು ಖಾಯಂ ಉದ್ಯೋಗವನ್ನು ನೀಡಿದ್ದು, ಇನ್ನೂ 121 ಪೌರಕಾರ್ಮಿಕರನ್ನು ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅವರನ್ನು ಖಾಯಂ ಉದ್ಯೋಗವನ್ನು ಅತಿ ಶೀಘ್ರದಲ್ಲಿ ನೀಡಲಾಗುವುದು ಎಂದು ಹೇಳಿದರು.
ಬಳ್ಳಾರಿ ನಗರ ಅಭಿವೃದ್ಧಿಯತ್ತ ಸಾಗುತ್ತಿದೆ. ಇನ್ನೂ ಕೆಲವು ಕಾಮಗಾರಿಗಳು, ರಸ್ತೆ ಅಗಲೀಕರಣ ಕಾಮಗಾರಿಗಳು ಬಾಕಿ ಇದ್ದು ಅದನ್ನು ಶೀಘ್ರದಲೇ ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು. ಸುವರ್ಣ ಬಳ್ಳಾರಿಯನ್ನಾಗಿ ಮಾಡುವ ಕನಸು ನನ್ನದಾಗಿದೆ ಎಂದು ತಿಳಿಸಿದರು.
ಬಳ್ಳಾರಿ ನಗರಕ್ಕೆ ತುಂಗಭದ್ರಾದಿAದ ನೀರಿನ ಪೈಪ್‌ಲೈನ್ ಕಾಮಗಾರಿಗೆ 12 ನೂರು ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಪ್ರಾರಂಭಿಕ 270 ಕೋಟಿ ರೂ.ಗಳಲ್ಲಿ ನಗರದಲ್ಲಿ ಟ್ಯಾಂಕ್ ನಿರ್ಮಾಣ ಮನೆ-ಮನೆಗೆ ಪೈಪ್‌ಲೈನ್ ಅಳವಡಿಕೆ ಯೋಜನೆ ರೂಪಿಸಿಕೊಂಡಿದ್ದೇವೆ. ಬಳ್ಳಾರಿ ಜಿಲ್ಲಾ ಆಸ್ಪತ್ರೆ ಅಭಿವೃದ್ಧಿಗೆ 300 ಕೋಟಿ ರೂ.ಗಳು ನೀಡಲಾಗಿದ್ದು, ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಹಲವಾರು ಟೀಕೆಗಳು ಬಂದರೂ ನನ್ನ ಅಭಿವೃದ್ಧಿ ಕಾರ್ಯವನ್ನು ಮುಂದಿನ ಪೀಳಿಗೆಗೆ ಉಪಯೋಗವಾಗುವ ರೀತಿಯಲ್ಲಿ ಪೂರ್ಣಗೊಳಿಸುತ್ತೇನೆ ಎಂದು ಹೇಳಿದರು.
ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಮಾತನಾಡಿ, ಪೌರ ಕಾರ್ಮಿಕರ ಪರಿಶ್ರಮದಿಂದ ನಮ್ಮ ಗ್ರಾಮಗಳು, ಪಟ್ಟಣ ಹಾಗೂ ನಗರ ಪ್ರದೇಶಗಳು ಸ್ವಚ್ಛವಾಗಿವೆ. ಪೌರಕಾರ್ಮಿಕರು ನಗರವನ್ನು ಸ್ವಚ್ಛವಾಗಿರಿಸಿ ನಮ್ಮೆಲ್ಲರ ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದಾರೆ ಎಂದರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ನಗರ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಪಾತ್ರ ಪ್ರಮುಖವಾಗಿದೆ. ಬಿಡುವಿಲ್ಲದ ನೈರ್ಮಲೀಕರಣ ಕಾರ್ಯ ಕೈಗೊಳ್ಳುತ್ತಿರುವ ಅವರ ಸೇವೆ ಅನನ್ಯವಾಗಿದೆ. ನಮ್ಮ ಸುತ್ತ-ಮುತ್ತಲಿನ ಪರಿಸರ ಸ್ವಚ್ಛತೆ ಕಾಪಾಡುವಿಕೆಗೆ ನಾವೆಲ್ಲರೂ ಸೇರಿ ಕೈಜೋಡಿಸಬೇಕಿದೆ ಎಂದರು.
ಪೌರ ಕಾರ್ಮಿಕರು ನಿವೃತ್ತಿ ಹೊಂದುವ ಸಮಯಲ್ಲಿ ಅವರಿಗೆ ಕೊನೆಯಲ್ಲಿ ನೀಡುವ ಪಿಂಚಣಿ ಇನ್ನಿತರೆ ಸೌಲಭ್ಯಗಳನ್ನು ಬಿಳ್ಕೋಡುವ ಸಮಯದಲ್ಲಿ ಅವರಿಗೆ ಚೆಕ್‌ಗಳು ನೀಡುವುದರಿಂದ ಅವರು ಕಚೇರಿಗೆ ಅಲೆದಾಡುವ ಪರಿಸ್ಥಿತಿ ಉಂಟಾಗುವುದಿಲ್ಲ. ಈ ನಿಯಮವನ್ನು ಬಳ್ಳಾರಿ ನಗರಕ್ಕೂ ಜಾರಿಗೊಳಿಸಲು ಆಯುಕ್ತರ ಜೊತೆ ಚರ್ಚಿಸಿದ್ದೇನೆ ಎಂದು ತಿಳಿಸಿದರು.
ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್. ಮಂಜುನಾಥ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪೌರ ಕಾರ್ಮಿಕರ ಸಮಸ್ಯೆಗಳು, ಕುಂದುಕೊರತೆಗಳು ಹಾಗೂ ಅವರ ಕಲ್ಯಾಣ ಕಾರ್ಯಕ್ಕಾಗಿ ನಿರಂತರವಾಗಿ ಶ್ರಮಿಸಿರುವ ಸಮಾಜ ಸುಧಾರಕ ಐ.ಪಿ.ಡಿ ಸಾಲಪ್ಪ ಅವರ ಜನ್ಮ ದಿನದ ಅಂಗವಾಗಿ ಪ್ರತಿವರ್ಷ ಸೆಪ್ಟೆಂಬರ್ 23 ರಂದು ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂದು ಹೇಳಿದರು.

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 452 ಖಾಯಂ ಪೌರಕಾರ್ಮಿಕರು ಇದ್ದಾರೆ. ಅದೇ ರೀತಿಯಾಗಿ 183 ಪೌರ ಕಾರ್ಮಿಕರು ನೇರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಲ್ಲಿ ನೇರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ 183 ಪೌರ ಕಾರ್ಮಿಕರಲ್ಲಿ 121 ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಖಾಯಂ ಮತ್ತು ನೇರಗುತ್ತಿಗೆಯಡಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು 2 ಸಾವಿರ ರೂ. ಸಂಕಷ್ಟ ಭತ್ಯೆ ಹಾಗೂ ವಿಶೇಷ ಭತ್ಯೆಯಾಗಿ 7 ಸಾವಿರ ರೂ. ಯನ್ನು ಸರ್ಕಾರ ನೀಡುತ್ತದೆ. ಸಾರ್ವಜನಿಕ ರಜಾ ದಿನಗಳಲ್ಲಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ಪ್ರತಿ ವರ್ಷ 21 ದಿನಗಳ ರಜಾ ವೇತನ ಹಾಗೂ 10
ವರ್ಷಗಳಿಗೊಮ್ಮೆ ವೇತನ ಮುಂಬಡ್ತಿ ಸಹ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ಕಾರ್ಮಿಕರಿಗೆ ಆಯೋಜಿಸಿದ್ದ ಕ್ರಿಕೆಟ್, ಮ್ಯೂಸಿಕಲ್ ಚೇರ್ ಸ್ಪರ್ಧೆಗಳಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪಮೇಯರ್ ಡಿ.ಸುಕುಂ, ಸಫಾಯಿ ಕರ್ಮಚಾರಿ ನಿಗಮದ ಸದಸ್ಯ ಕಂದಕೂರು ರಾಮುಡು, ಮಾಜಿ ಮೇಯರ್ ರಾಜೇಶ್ವರಿ, ಉಪ ಆಯುಕ್ತ ನಂದೀಶ್, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಪದ್ಮರೋಜ ಸೇರಿದಂತೆ ಪಾಲಿಕೆಯ ಸದಸ್ಯರು, ಅಧಿಕಾರಿ, ಸಿಬ್ಬಂದಿಗಳು ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.