ನವಮಾಸದ ಬಳಿಕ ಧರೆಗಿಳಿದ ನಾಸಾ ವಿಜ್ಞಾನಿಗಳು

Ravi Talawar
ನವಮಾಸದ ಬಳಿಕ ಧರೆಗಿಳಿದ ನಾಸಾ ವಿಜ್ಞಾನಿಗಳು
WhatsApp Group Join Now
Telegram Group Join Now

 ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಒಂಬತ್ತು ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27ಕ್ಕೆ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗಿಳಿದರು.

ಇಬ್ಬರೂ ಕಳೆದ ವರ್ಷ ಜೂನ್‌ನಲ್ಲಿ ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ತಾಂತ್ರಿಕ ತೊಂದರೆಗಳು ಮತ್ತು ವೇಳಾಪಟ್ಟಿಯಲ್ಲಿನ ಬದಲಾವಣೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು. ಕೆಲವೇ ದಿನಗಳ ಈ ಕಾರ್ಯಾಚರಣೆ ಒಂಬತ್ತು ತಿಂಗಳಿಗೆ ವಿಸ್ತರಣೆಗೊಂಡಿತ್ತು.

ಹಾಗಾಗಿ, 59 ವರ್ಷದ ಸುನೀತಾ ವಿಲಿಯಮ್ಸ್ ಮತ್ತು 62 ವರ್ಷದ ಬುಚ್ ವಿಲ್ಮೋರ್ ಭೂಮಿಗೆ ಮರಳುವುದನ್ನು ಕಾಯಲಾಗುತ್ತಿತ್ತು. ಈ ಕಾಯುವಿಕೆ ಇದೀಗ ಇಬ್ಬರೂ ಸುರಕ್ಷಿತವಾಗಿ ಮರಳುವುದರೊಂದಿಗೆ ಕೊನೆಗೊಂಡಿದೆ.

ಜೂನ್ 2024ರಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿದ್ದ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರೊಂದಿಗೆ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಕೂಡಾ ಮರಳಿದ್ದಾರೆ. ಐಎಸ್‌ಎಸ್‌ ಕ್ರೂ-9 ಸದಸ್ಯರನ್ನು ಹೊತ್ತ ಸ್ಪೇಸ್‌ಎಕ್ಸ್ ಡ್ರ್ಯಾಗನ್ ನೌಕೆ ಫ್ಲೋರಿಡಾದ ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಯಿತು.

WhatsApp Group Join Now
Telegram Group Join Now
Share This Article