ನೇಸರಗಿ: ಮತ್ತಿಕೊಪ್ಪದ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಕೃಷಿ ಸಖಿಯರಿಗೆ ನೈಸರ್ಗಿಕ ಕೃಷಿ ತರಬೇತಿಯನ್ನು ಹಮ್ಮಿಕೊಂಡಿದ್ದು, ತರಬೇತಿ ಕಾರ್ಯಕ್ರಮವನ್ನು ಬೆಳಗಾವಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಶ್ರೀ ಹೆಚ್. ಡಿ. ಕೊಳೇಕರ ಉದ್ಘಾಟಿಸಿದರು. ನಂತರ ನೈಸರ್ಗಿಕ ಕೃಷಿಯ ಕುರಿತು ಮಾತನಾಡಿ, ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಯಾದ ನೈಸರ್ಗಿಕ ಕೃಷಿ ಅನು?ನಗೊಳಿಸಲು ಕೃಷಿ ಸಖಿಯರಿಗೆ ಐದು ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ೬೮೭೫ ಎಕರೆ ಕ್ಷೇತ್ರದಲ್ಲಿ ನೈಸರ್ಗಿಕ ಕೃಷಿಯನ್ನು ಅನು?ನಗೊಳಿಸುವ ಗುರಿಯನ್ನು ಹೊಂದಿದೆ. ನೈಸರ್ಗಿಕ ಕೃಷಿ ರೈತರ ಹೊಲದಲ್ಲಿಯೇ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿ ಕಡಿಮೆ ಖರ್ಚಿನಲ್ಲಿ ಅಳವಡಿಸಬಹುದಾದ ರಾಸಾಯನಿಕ ಮುಕ್ತ ಕೃಷಿ ಪದ್ಧತಿಯಾಗಿದೆ. ಈ ಕೃಷಿಯಲ್ಲಿ ನಾಲ್ಕು ಮೂಲ ತತ್ವಗಳಾದ ಬೀಜಾಮೃತ, ಜೀವಾಮೃತ, ಬೆಳೆಗಳ ಹೊದಿಕೆ ಮತ್ತು ವಾಫಸಾ ಆಧಾರದಲ್ಲಿ ಸಸ್ಯಗಳಿಗೆ ಬೇಕಾಗುವ ಪೋಷಕಾಂಶಗಳನ್ನು ಪೂರೈಸುವ ಸೂಕ್ಷ್ಮಾಣು ಜೀವಿಗಳನ್ನು ಹಾಗೂ ನೈಸರ್ಗಿಕ ಎರೆಹುಳುಗಳ ಅಭಿವೃದ್ಧಿಯನ್ನು ಪ್ರೋತ್ಸಾಹಿಸಲಾಗುವುದು. ನೈಸರ್ಗಿಕ ಕೃಷಿಯಲ್ಲಿ ಹಸು ಮೂಲ ಆಧಾರವಾಗಿದ್ದು ಹಸುವಿನ ಸಗಣಿ ಮತ್ತು ಗಂಜಲುಗಳನ್ನು ಬಳಸಿ ನೈಸರ್ಗಿಕ ಕೃಷಿ ಪರಿಕರಗಳನ್ನು ತಯಾರಿಸಿ ಬಳಸಲಾಗುವುದು. ಆದ್ದರಿಂದ ದೇಸಿ ಹಸುಗಳನ್ನು ಸಂರಕ್ಷಿಸಿ ಪಾಲನೆ ಮಾಡಬೇಕೆಂದು ಕರೆ ನೀಡಿದರು.
ಕೇಂದ್ರದ ಕಾರ್ಯಾಧ್ಯಕ್ಷರಾದ ಶ್ರೀ ಬಿ. ಆರ್. ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನಂತರ ಮಾತನಾಡಿದ, ನೈಸರ್ಗಿಕ ಕೃಷಿ ಅನುಸರಣೆಯಿಂದ ರೈತರು ತಮ್ಮ ಕುಟುಂಬದ ಆರೋಗ್ಯವನ್ನು ರಕ್ಷಿಸಿ, ಆರ್ಥಿಕವಾಗಿ ಸಬಲರಾಗುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಬೇಕು ಎಂದರು. ಕೃಷಿ ಸಖಿಯರು ಕೃಷಿ ಇಲಾಖೆಯಲ್ಲಿ ವಿಸ್ತರಣಾ ಕಾರ್ಯಕರ್ತೆಯರಾಗಿ ರೈತ ಮತ್ತು ಕೃಷಿ ವಿಜ್ಞಾನ ಕೇಂದ್ರಗಳ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸುತ್ತಿರುವ ಕೃಷಿ ಸಖಿಯರು ಗ್ರಾಮ ಪಂಚಾಯತಿ ಮಟ್ಟದಲ್ಲಿ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆಗಳನ್ನು ನಡೆಸುವ ಉಸ್ತುವಾರಿ ಹೊಂದಿರುತ್ತಾರೆ. ಅವರ ಸಾಮರ್ಥ್ಯವನ್ನು ಹೆಚ್ಚಿಸಲು ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಕೃಷಿ ಸಖಿಯರು ತರಬೇತಿಯಲ್ಲಿ ಕಲಿತ ವಿ?ಯಗಳನ್ನು ರೈತರಿಗೆ ತಿಳಿಸಿ ಈ ಯೋಜನೆಯನ್ನು ಸಮರ್ಥವಾಗಿ ಅಳವಡಿಸಿ ರಾಸಾಯನಿಕ ಮುಕ್ತ ಕೃಷಿಯನ್ನು ಉತ್ತೇಜಿಸಬೇಕು ಎಂದು ಕರೆ ನೀಡಿದರು.
ಕೇಂದ್ರದ ಮುಖ್ಯಸ್ಥ ಡಾ. ಮಂಜುನಾಥ ಚೌರಡ್ಡಿ ಮಾತನಾಡಿ, ರಾಷ್ಟ್ರೀಯ ನೈಸರ್ಗಿಕ ಕೃಷಿಯ ಅಭಿಯಾನದಡಿ ಇಡಿ ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಅನು?ನಗೊಳಿಸಲು ತರಬೇತಿ ಜವಾಬ್ದಾರಿಯನ್ನು ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರಕ್ಕೆ ನೀಡಲಾಗಿದೆ. ಕಾರ್ಯಕ್ರಮದ ಭಾಗವಾಗಿ ಕೃಷಿ ಸಖಿಯರಿಗೆ ಪ್ರಾಯೋಗಿಕವಾಗಿ ತರಬೇತಿ ನೀಡಲು ಕೇಂದ್ರದಲ್ಲಿ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ಪರಿಕರಗಳ ಉತ್ಪಾದನೆ ಘಟಕ ಹಾಗೂ ಸಸ್ಯ ಅನು?ನಗೊಳಿಸಲಾಗಿದೆ.
ಕೇಂದ್ರದ ನೋಡಲ್ ಅಧಿಕಾರಿ ಹಾಗೂ ಮಣ್ಣು (ವಿಜ್ಞಾನಿ) ಎಸ್. ಎಮ್. ವಾರದ, ಕಾರ್ಯಕ್ರಮದಲ್ಲಿ ಎಲ್ಲ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿ, ಈ ಕೃಷಿಯನ್ನು ವಿಸ್ತರಿಸುವ ಯೋಜನೆಯ ಭಾಗವಾಗಿ ಐದು ದಿನಗಳ ತರಬೇತಿಯನ್ನು ಕೃಷಿ ಸಖಿಯರಿಗೆ ಹಮ್ಮಿಕೊಳ್ಳಲಾಗಿದೆ ಎಂದರು. ನೈಸರ್ಗಿಕ ಕೃಷಿ ಪರಿಕರವಾದ ಜೀವಾಮೃತದ ತಯಾರಿಕೆ ಪದ್ಧತಿ ಪ್ರಾತ್ಯಕ್ಷಿಕೆಯನ್ನು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಉಪ ಜಂಟಿ ಕೃಷಿ ನಿರ್ದೇಶಕ ಶ್ರೀ ಸಲೀಂ ಸಂಗತ್ರಾಸ್, ಸಹಾಯಕ ಕೃಷಿ ನಿರ್ದೇಶಕರಾದ ಸಿ. ಆಯ್. ಹೂಗಾರ ಹಾಗೂ ಬಸವರಾಜ ದಳವಾಯಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕೇಂದ್ರದ ವಿಜ್ಞಾನಿ ಡಾ. ಎಸ್. ಎಸ್. ಹಿರೇಮಠ ವಂದಿಸಿದರು. ಜಿ. ಬಿ. ವಿಶ್ವನಾಥ, ಪ್ರವೀಣ ಯಡಹಳ್ಳಿ, ಡಾ. ಭಾವಿನಿ ಪಾಟೀಲ, ಡಾ. ಗುರುರಾಜ ಕೌಜಲಗಿ, ಶಂಕರಗೌಡ ಪಾಟೀಲ ಹಾಗೂ ವಿನೋದ ಕೋಚಿ ಭಾಗವಹಿಸಿದ್ದರು. ತರಬೇತಿಯಲ್ಲಿ ವಿವಿಧ ತಾಲೂಕುಗಳ ೪೦ ಕೃಷಿ ಸಖಿಯರು ಪಾಲ್ಗೊಂಡಿದ್ದರು.
ಕೃಷಿ ಸಖಿಯರಿಗೆ ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ನೈಸರ್ಗಿಕ ಕೃಷಿ ತರಬೇತಿ
