ಬಳ್ಳಾರಿ,ಜ.31- ನಾಗರಿಕರು ಸ್ವಚ್ಛತೆ, ನೈರ್ಮಲ್ಯ ಹಾಗೂ ತ್ಯಾಜ್ಯ ವಿಲೇವಾರಿ ಕುರಿತು ಅರಿವು ಹೊಂದಬೇಕು ಎಂದು 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ.ಪ್ರಮೋದ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ‘ರಾಷ್ಟಿçÃಯ ಸ್ವಚ್ಛತಾ ದಿನಾಚರಣೆ’ ಅಂಗವಾಗಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿಯವರ ಹುತಾತ್ಮರಾದ ದಿನದ ನೆನಪಿಗಾಗಿ ರಾಷ್ಟಿçÃಯ ಸ್ವಚ್ಛತಾ ದಿನ ಆಚರಿಸಲಾಗುತ್ತದೆ. ಎಲ್ಲರೂ ಸ್ವಚ್ಛತೆ ಮತ್ತು ನೈರ್ಮಲ್ಯತೆಗೆ ಪ್ರಾಮುಖ್ಯತೆ ನೀಡೋಣ ಎಂದು ಹೇಳಿದರು.
ತ್ಯಾಜ್ಯ ನಿರ್ವಹಣೆ ಕುರಿತು ಅರಿವು ಹೊಂದಬೇಕು. ತ್ಯಾಜ್ಯವನ್ನು ವಿಂಗಡಿಸುವ ಮೂಲಕ ನಗರ ಸ್ಥಳೀಯ-ಸಂಸ್ಥೆಗಳ ವ್ಯಾಪ್ತಿಯ ಕಸ ವಿಲೇವಾರಿ ವಾಹನಗಳಿಗೆ ನೀಡಬೇಕು. ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತದ ಕನಸನ್ನು ನನಸಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಪ್ರಿನ್ಸಿಪಲ್ ಹಿರಿಯ ಸಿವಿಲ್ ನ್ಯಾಯಾಧೀಶರಾದ ಇಬ್ರಾಹಿಂ ಮುಜಾವರ್ ಅವರು ಮಾತನಾಡಿ, ಎಲ್ಲಿ ಶುಚಿತ್ವ ಅಡಗಿರುತ್ತದೆಯೋ; ಅಲ್ಲಿ ದೈಹಿಕ, ಮಾನಸಿಕ ಆರೋಗ್ಯ ಸದೃಢವಾಗಿರುತ್ತದೆ. ಅದೇರೀತಿಯಾಗಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುವ ಸಂಭವವಿದ್ದು, ಪ್ರತಿಯೊಬ್ಬರೂ ಪ್ಲಾಸ್ಟಿಕ್ ಚೀಲ, ಪ್ಲಾಸ್ಟಿಕ್ ಬಾಟಲ್ ಗಳ ಬಳಕೆ ಕಡಿಮೆಗೊಳಿಸಬೇಕು. ಇದರಿಂದ ಮುಂದಿನ ಪೀಳಿಗೆಗೆ ಆರೋಗ್ಯಕರ ಪರಿಸರ ಕೊಡುಗೆ ನೀಡಿದಂತಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್.ಹೊಸಮನೆ ಅವರು ಮಾತನಾಡಿ, ಸ್ವಚ್ಛತೆಯು ಆರೋಗ್ಯಕರ ಜೀವನದ ಅವಿಭಾಜ್ಯ ಅಂಗವಾಗಿದ್ದು, ನಾವೆಲ್ಲರೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮಹಾತ್ಮ ಗಾಂಧೀಜಿಯವರ ಪರಿಕಲ್ಪನೆಯಂತೆ ಸುಂದರ-ಸ್ವಚ್ಛ ಭಾರತ ನಿರ್ಮಿಸೋಣ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
ಈ ವೇಳೆ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಘವೇಂದ್ರ ಗೌಡ.ಬಿ.ಜಿ., 3ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಡಿ.ಪಿ ಕುಮಾರ ಸ್ವಾಮಿ, 4ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವಾಸುದೇವ ರಾಧಕಾಂತ್ ಗುಡಿ, ಪ್ರಿನ್ಸಿಪಲ್ ಕೌಟುಂಬಿಕ ನ್ಯಾಯಾಧೀಶರಾದ ವೆಂಕಟೇಶ್, ಒಂದನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ನಸ್ರತ್ ಮುಖ್ತಾರ್ ಅಹ್ಮದ್ ಖಾನ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್.ಎನ್.ಹೊಸಮನೆ, ಪ್ರಿನ್ಸಿಪಲ್ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ನಾಗೇಶ್ ನಾಯ್ಕ, 1ನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಸಿದ್ದಲಿಂಗಯ್ಯ ಗಂಗಾಧರ ಮಠ, 2ನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ವಿನುತಾ ಬಿ.ಎಸ್., 3ನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಮುದುಕಪ್ಪ ಒಡನ್ ಸೇರಿದಂತೆ ಜಿಲ್ಲಾ ನ್ಯಾಯಾಲಯದ ಅಧಿಕಾರಿ-ಸಿಬ್ಬಂದಿ ವರ್ಗ ಭಾಗವಹಿಸಿದ್ದರು.
ಸ್ವಚ್ಛತೆ, ನೈರ್ಮಲ್ಯ ಕುರಿತು ಅರಿವು ಇರಲಿ: ನ್ಯಾ.ಬಿ.ಜಿ.ಪ್ರಮೋದ


