ಹರ್ಯಾಣದಲ್ಲಿ ಮೂರನೇ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗಲಿದೆ. ನಯಾಬ್ ಸಿಂಗ್ ಸೈನಿ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಶಾಸಕಾಂಗ ಪಕ್ಷದ ನಾಯಕರಾಗಿ ಬುಧವಾರ ಆಯ್ಕೆಯಾದರು. ಈ ಸಂದರ್ಭದಲ್ಲಿ ವೀಕ್ಷಕರಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಉಪಸ್ಥಿತರಿದ್ದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಂಚಕುಲದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಹ ಭಾಗವಹಿಸಲಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದು ಅತ್ಯುತ್ತಮ ಸಾಧನೆ ಮಾಡಿದೆ. ಮೂವರು ಸ್ವತಂತ್ರರು ಕೂಡ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಹೀಗಿರುವಾಗ ಬಿಜೆಪಿಯ ಒಟ್ಟು 51 ಶಾಸಕರ ಬಲ ಬಂದಿದೆ.