ಪಂಚಕುಲ ಅಕ್ಟೋಬರ್ 17: ಸತತ ಎರಡನೇ ಬಾರಿಗೆ ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಅವರು ಇಂದು (ಗುರುವಾರ) ಪಂಚಕುಲದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಇತರ ಸಿಎಂಗಳು, ಉಪ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಎನ್‌ಡಿಎ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು.