ದೆಹಲಿ ಜುಲೈ 22: ನೀಟ್ ಪದವಿಪೂರ್ವ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಕುರಿತು ಸೋಮವಾರ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿವೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರುಈ ವಿಷಯದ ಬಗ್ಗೆ ಕೇಂದ್ರ ಸಚಿವರ ತಿಳುವಳಿಕೆಯನ್ನು ಪ್ರಶ್ನಿಸಿದರು.
“ನೀಟ್ ಮಾತ್ರವಲ್ಲದೆ, ಎಲ್ಲಾ ಪ್ರಮುಖ ಪರೀಕ್ಷೆಗಳಲ್ಲಿ ನಮ್ಮ ಪರೀಕ್ಷಾ ವ್ಯವಸ್ಥೆಯಲ್ಲಿ ಬಹಳ ಗಂಭೀರವಾದ ಸಮಸ್ಯೆ ಇದೆ ಎಂಬುದು ಇಡೀ ದೇಶಕ್ಕೆ ಸ್ಪಷ್ಟವಾಗಿದೆ. ಸಚಿವರು (ಧರ್ಮೇಂದ್ರ ಪ್ರಧಾನ್) ತಮ್ಮನ್ನು ಹೊರತುಪಡಿಸಿ ಎಲ್ಲರನ್ನೂ ದೂಷಿಸಿದ್ದಾರೆ. ಇಲ್ಲಿ ಏನಾಗುತ್ತಿದೆ ಎಂಬುದನ್ನು ಅವರ ಅರ್ಥ ಮಾಡಿಕೊಂಡಿದ್ದಾರೆ ಎಂದು ನಾನು ಭಾವಿಸುತ್ತಿಲ್ಲ ಎಂದು ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ಅಧಿವೇಶನದಲ್ಲಿ ಮಾತನಾಡಿದ ರಾಹುಲ್ ಹೇಳಿದ್ದಾರೆ.