ನವದೆಹಲಿ, ಜೂನ್ 13: ಇಸ್ರೇಲ್ ಮತ್ತು ಇರಾನ್ ದೇಶಗಳ ನಡುವೆ ಮತ್ತೆ ದಾಳಿ ಶುರುವಾಗಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುಅವರಿಂದ ದೂರವಾಣಿ ಕರೆ ಬಂದಿದೆ. ಈ ಬಗ್ಗೆ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ನರೇಂದ್ರ ಮೋದಿ ಇಸ್ರೇಲ್ ಪ್ರಧಾನಿಯೊಂದಿಗಿನ ತಮ್ಮ ಸಂವಾದವನ್ನು ದೃಢಪಡಿಸಿದ್ದಾರೆ.
“ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಬಂದಿದೆ. ಅವರು ಇಸ್ರೇಲ್-ಇರಾನ್ ಪರಿಸ್ಥಿತಿಯ ಬಗ್ಗೆ ನನಗೆ ವಿವರಿಸಿದ್ದಾರೆ. ನಾನು ಭಾರತದ ಕಳವಳಗಳನ್ನು ಹಂಚಿಕೊಂಡಿದ್ದೇನೆ. ಆ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸುವ ಅಗತ್ಯವನ್ನು ಒತ್ತಿ ಹೇಳಿದ್ದೇನೆ” ಎಂದು ಮೋದಿ ಎಕ್ಸ್ನಲ್ಲಿನ ಪೋಸ್ಟ್ನಲ್ಲಿ ಬರೆದಿದ್ದಾರೆ.