ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೊಂಡು ಸುಮಾರು 6 ತಿಂಗಳು ಕಳೆದಿವೆ, ಪ್ರತಿದಿನ ಲಕ್ಷಾಂತರ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಈಗ ರಾಮಮಂದಿರ ಟ್ರಸ್ಟ್ ರಾಮನ ಗರ್ಭಗುಡಿಯಲ್ಲಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇನ್ನು ರಾಮಮಂದಿರದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿದೆ.
ಈ ಡ್ರೆಸ್ ಕೋಡ್ ಅರ್ಚಕರಿಗೆ ಅನ್ವಯವಾಗಲಿದೆ, ದೇವಸ್ಥಾನದ ಅರ್ಚಕರು ಇನ್ನುಮುಂದೆ ಒಂದೇ ಬಗೆಯ ಉಡುಪಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಚಕರು ಚೌಬಂದಿ ಪೇಟ ಹಾಗೂ ಹಳದಿ ಬಣ್ಣದ ಧೋತಿ, ಕುರ್ತಾವನ್ನು ಧರಿಸಲಿದ್ದಾರೆ.
ರಾಮಲಲ್ಲಾ ಆವರಣದಲ್ಲಿ ಕೆಲಸ ಮಾಡುವವರಿಗೆ ಶೀಘ್ರ ಡ್ರೆಸ್ ಕೋಡ್ ಶೀಘ್ರ ಜಾರಿಯಾಗಲಿದೆ. ಅಯೋಧ್ಯೆಯ ರಾಮಮಂದಿರದ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.