ಬೆಂಗಳೂರು:
ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ದಿಲೀಪ್ ರಾಜ್ ಅಕಾಲಿಕ ಮರಣ ಅಪಾರ ಸಂಖ್ಯೆಯ ಅಭಿಮಾನಿಗಳು ಮತ್ತು ಚಿತ್ರರಂಗಕ್ಕೆ ಬರಸಿಡಿಲು ಬಡಿದ ಅನುಭವವಾಗಿದೆ.
ಸ್ಯಾಂಡಲ್‍ವುಡ್‍ನ ಪ್ರತಿಭಾನ್ವಿತ ನಟನಾಗಿ ಗುರುತಿಸಿಕೊಂಡಿದ್ದ ಇವರು ಕಿರುತೆರೆ ಮಾತ್ರವಲ್ಲದೇ ಹಿರಿತೆರೆಯಲ್ಲಿಯೂ ಗುರುತಿಸಿಕೊಂಡಿದ್ದರು. ಇಂದು ಮುಂಜಾನೆ ಹೃದಯಾಘಾತ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
